ಬೆಂಗಳೂರು: ನಗರದ ಊರ್ವಶಿ ಚಿತ್ರಮಂದಿರದ ಮಹಿಳೆಯರ ಶೌಚಾಲಯದ ಕಿಟಕಿಯಲ್ಲಿ ಮೊಬೈಲ್ ಇರಿಸಿ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಬಾಲಕರನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಆಗಸ್ಟ್ 10ರಂದು ಯುವತಿಯೊಬ್ಬರು ‘ಭೀಮ’ ಚಿತ್ರವನ್ನು ವೀಕ್ಷಿಸಲು ಎಚ್. ಸಿದ್ಧಯ್ಯ ರಸ್ತೆಯ ಚಿತ್ರಮಂದಿರಕ್ಕೆ ತೆರಳಿದ್ದರು. ಸಿನಿಮಾದ ಮಧ್ಯಂತರ ವಿರಾಮದ ಅವಧಿಯಲ್ಲಿ ಶೌಚಾಲಯಕ್ಕೆ ಹೋಗಿದ್ದರು. ಅದೇ ಸಂದರ್ಭದಲ್ಲಿ ಬಾಲಕರಿಬ್ಬರು ಶೌಚಾಲಯದ ಕಿಟಕಿಯಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.

‘ಯುವತಿಯು ಶೌಚಾಲಯದ ಒಳಕ್ಕೆ ಹೋದಾಗ ಆರೋಪಿಗಳ ಕೈ ನೆರಳು ಬಿದ್ದಿರುವುದನ್ನು ಗಮನಿಸಿದ್ದರು. ಬಳಿಕ ಅವರು ಪರಿಶೀಲನೆ ನಡೆಸಿದಾಗ ಕಿಟಕಿಯೊಳಗೆ ಕೈ ಹಾಕಿ ಮೊಬೈಲ್ ಮೂಲಕ ಚಿತ್ರೀಕರಣ ಮಾಡುತ್ತಿರುವುದು ಕಂಡುಬಂದಿತ್ತು’ ಎಂದು ಪೊಲೀಸರು ಹೇಳಿದರು.

‘ಕೂಡಲೇ ಶೌಚಾಲಯದಿಂದ ಹೊರಗಡೆ ಓಡಿಬಂದ ಯುವತಿ ಕೂಗಿಕೊಂಡು, ಆರೋಪಿಗಳನ್ನು ಹಿಡಿಯಲು ಪ್ರಯತ್ನಿಸಿದ್ದರು. ಆದರೆ, ಇಬ್ಬರೂ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಈ ಕುರಿತು ಯುವತಿ ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಇಬ್ಬರು ಬಾಲಕರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.