ಬೆಂಗಳೂರು: ಉತ್ತರ ಪ್ರದೇಶದಲ್ಲಿ ನಡೆದಿದ್ದ ಘಟನೆ ವಿಡಿಯೊವನ್ನು ‘ಬೆಂಗಳೂರಿನಲ್ಲಿ ರೌಡಿಗಳ ಪುಂಡಹಾಸ’ ಎಂಬುದಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯುವತಿಯನ್ನು ಪುಲಕೇಶಿನಗರ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕೋಣನಕುಂಟೆ ನಿವಾಸಿ ಶಹಾ ಜಹಾನ್ (36) ಎಂಬ ಯುವತಿಯನ್ನು ಬಂಧಿಸಿ, ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಡಿಯೊ, ಫೋಟೊ ಹಾಗೂ ಸುದ್ದಿಗಳನ್ನು ತನ್ನ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದರು. ಅದೇ ರೀತಿ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದ್ದ ಹಳೆಯ ಘಟನೆಯೊಂದರ ವಿಡಿಯೊವನ್ನು ‘ಬೆಂಗಳೂರಿನಲ್ಲಿ ರೌಡಿಗಳ ಪುಂಡಹಾಸ’ ಎಂಬ ಶೀರ್ಷಿಕೆ ಅಡಿ ಸೆ.6ರಂದು ಹಂಚಿಕೊಂಡಿದ್ದರು. ಸಾಮಾಜಿಕ ಜಾಲತಾಣಗಳ ನಿರ್ವಹಣಾ ವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿಡಿಯೊ ಪರಿಶೀಲನೆ ನಡೆಸಿದಾಗ ಅದು ಬೆಂಗಳೂರಿನಲ್ಲಿ ನಡೆದ ಘಟನೆ ವಿಡಿಯೊ ಅಲ್ಲ ಎಂಬುದು ಗೊತ್ತಾಗಿತ್ತು. ಬಳಿಕ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 132, 121, 352, 3(5) ಅಡಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ಘಟನೆಯ ಕುರಿತು ಶಹಾ ಜಹಾನ್ ಸಹ ಸ್ಪಷ್ಟನೆ ನೀಡಿದ್ದು, ‘ಮತ್ತೊಬ್ಬರು ಹಂಚಿಕೊಂಡಿದ್ದ ವಿಡಿಯೊವನ್ನು ನಾನು ಜನಜಾಗೃತಿಯ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಮರುಹಂಚಿಕೊಂಡಿದ್ದೆ. ಮುಂದಿನ ದಿನಗಳಲ್ಲಿ ಈ ರೀತಿಯಾಗಿ ವಿಡಿಯೊ ಹಂಚಿಕೊಳ್ಳುವುದಿಲ್ಲ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.