ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಭ್ಯರ್ಥಿ ಎಚ್‌.ಎಸ್‌. ಗೋಪಿನಾಥ್‌ ಬಳಿ ₹ 47.84 ಕೋಟಿ ಆಸ್ತಿ

Last Updated 23 ನವೆಂಬರ್ 2021, 20:15 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್‌ನ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಎಚ್‌.ಎಸ್‌. ಗೋಪಿನಾಥ್‌ ₹ 47.84 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿಗೆ ಮಂಗಳವಾರ ನಾಮಪತ್ರದೊಂದಿಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಅವರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದು, ₹ 42.40 ಕೋಟಿ ಮೌಲ್ಯದ ಸ್ಥಿರಾಸ್ತಿ ಮತ್ತು ₹ 5.44 ಕೋಟಿ ಮೌಲ್ಯದ ಚರಾಸ್ತಿಗಳನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ.

ಈ ಪೈಕಿ ಪೂರ್ಣ ಪ್ರಮಾಣದ ಸ್ಥಿರಾಸ್ತಿ ಗೋಪಿನಾಥ್‌ ಅವರ ಹೆಸರಿನಲ್ಲೇ ಇದೆ. ಅವರ ಪತ್ನಿ ₹ 2.11 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದರೆ, ₹ 1.38 ಕೋಟಿ ಮೌಲ್ಯದ ಚರಾಸ್ತಿ ಒಟ್ಟು ಕುಟುಂಬದ ಹೆಸರಿನಲ್ಲಿದೆ.

ಸಿವಿಲ್‌ ಎಂಜಿನಿಯರಿಂಗ್‌ಪದವೀಧರರಾಗಿರುವ ಗೋಪಿನಾಥ್‌ ಅವರು, ₹ 3.75 ಕೋಟಿ ಸಾಲ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT