ಬೆಂಗಳೂರು: ‘ಪೊಗೊ’ ಅಭಿಯಾನದ ಹೆಸರಿನಲ್ಲಿ ಗೋವಾದಲ್ಲಿರುವ 4 ಲಕ್ಷ ಕನ್ನಡಿಗರನ್ನು ಓಡಿಸುವ ಸಂಚು ನಡೆಯುತ್ತಿದ್ದು, ಮುಖ್ಯಮಂತ್ರಿ ಅವರೇ ಸದನಕ್ಕೆ ಬಂದು ಉತ್ತರಿಸಬೇಕು ಎಂದು ಆಗ್ರಹಿಸಿ ವಿಧಾನಪರಿಷತ್‌ನಲ್ಲಿಶುಕ್ರವಾರ ವಿರೋಧಪಕ್ಷದ ಸದಸ್ಯರು ಧರಣಿ ನಡೆಸಿದರು.

ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಈ ವಿಷಯ ಸಂಬಂಧಿಸಿ ಕನ್ನಡ ಮತ್ತು ಸಂಸ್ಕೃತಿ ಸಚಿವಸಿ.ಟಿ.ರವಿ ಉತ್ತರ ನೀಡಿದರು.

‘ಗೋವಾದಲ್ಲಿ ಸಹ ಬಿಜೆಪಿ ಸರ್ಕಾರ ಇದೆ, ಕನ್ನಡಿಗರಿಗೆ ಯಾವುದೇ ತೊಂದರೆ ಕೊಡುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಅವರೇ ತಿಳಿಸಿದ್ದಾರೆ, ಒಂದು ರಾಜಕೀಯ ಪಕ್ಷ ತನ್ನ ಉದ್ದೇಶ ಈಡೇರಿಸಿಕೊಳ್ಳಲು ಮಾಡಿರುವ ತಂತ್ರ ಇದು, ಇಟಲಿ, ಇಂಗ್ಲೆಂಡ್ ಗಳಂತಹ ದೇಶಗಳಿಂದಲೇ ತನ್ನ ಪ್ರಜೆಗಳನ್ನು ಭಾರತ ಸರ್ಕಾರ ರಕ್ಷಿಸಿದೆ, ಗೋವಾದಲ್ಲಿ ಕನ್ನಡಿಗರ ಹಿತ ರಕ್ಷಣೆಗೆ ಸಹ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು. ಈ ಉತ್ತರದಿಂದ ಕೆರಳಿದ ವಿರೋಧಪಕ್ಷದ ನಾಯಕ ಎಸ್.ಆರ್.ಪಾಟೀಲ ಅವರು ಇತರ ಸದಸ್ಯರೊಂದಿಗೆ ಸಭಾಪತಿ ಪೀಠದ ಮುಂಭಾಗಕ್ಕೆ ಬಂದು ಧರಣಿ ಆರಂಭಿಸಿದರು. ಕೆಲವರು ಘೋಷಣೆ ಕೂಗಿದರು. ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ 15 ನಿಮಿಷಕಲಾಪ ಮುಂದೂಡಿದರು.

ಮತ್ತೆ ಕಲಾಪ ಆರಂಭವಾದಾಗಲೂ ಧರಣಿ ಮುಂದುವರಿಯಿತು. ಸಚಿವ ಸಿ.ಟಿ.ರವಿ ಅವರ ಹೇಳಿಕೆಗೆ ತೃಪ್ತರಾಗದ ಎಸ್.ಆರ್.ಪಾಟೀಲ, ಬಸವರಾಜ ಹೊರಟ್ಟಿ, ಕೆ.ಟಿ.ಶ್ರೀಕಂಠೇಗೌಡ ಅವರು ಮುಖ್ಯಮಂತ್ರಿ ಅವರೇ ಸೋಮವಾರ ಬೆಳಿಗ್ಗೆ ಸದನಕ್ಕೆ ಬಂದು ಉತ್ತರ ನೀಡ
ಬೇಕು, ಗೋವಾಕ್ಕೆ ನಿಯೋಗ ಕಳುಹಿಸಬೇಕು ಎಂದರು. ಮುಖ್ಯಮಂತ್ರಿ ಬಳಿ ಈ ವಿಚಾರ ಚರ್ಚಿಸಿ, ಸದನಕ್ಕೆ ಬರಲು ತಿಳಿಸುವುದಾಗಿ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ ಬಳಿಕ ಧರಣಿ ಹಿಂತೆಗೆದುಕೊಳ್ಳಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.