ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ವಿರುದ್ಧ ಹೊರಟ್ಟಿ ಹಕ್ಕುಚ್ಯುತಿ

Last Updated 11 ಮಾರ್ಚ್ 2020, 23:11 IST
ಅಕ್ಷರ ಗಾತ್ರ

ಬೆಂಗಳೂರು:ಧಾರವಾಡದಲ್ಲಿ ಫೆಬ್ರುವರಿ 21ರಿಂದ 24ರವರೆಗೆ ಸರ್ಕಾರದ ವತಿಯಿಂದ ಏರ್ಪಡಿಸಿದ್ದ ರಾಜ್ಯಮಟ್ಟದ ಕುಸ್ತಿ ಹಬ್ಬಕ್ಕೆ ಬಿಜೆಪಿ ಹೊರತುಪಡಿಸಿ ಬೇರೆ ಪಕ್ಷದ ಜನಪ್ರತಿನಿಧಿಗಳನ್ನು ಆಹ್ವಾನಿಸದ ಅಧಿಕಾರಿಗಳ ವಿರುದ್ಧ ಜೆಡಿಎಸ್‌ ಸದಸ್ಯ ಬಸವರಾಜ ಹೊರಟ್ಟಿ ಬುಧವಾರ ವಿಧಾನ ಪರಿಷತ್‌ನಲ್ಲಿ ಹಕ್ಕುಚ್ಯುತಿ ಮಂಡಿಸಿದ್ದಾರೆ.

‘ಅಧಿಕಾರಿಗಳು ಪಕ್ಷಪಾತ ಮಾಡಿದ್ದಾರೆ. ಇದರಿಂದ ನನ್ನ ಹಕ್ಕುಗಳಿಗೆ ಚ್ಯುತಿ ಉಂಟಾಗಿದೆ’ ಎಂದು ಹೇಳಿದ ಹೊರಟ್ಟಿ ಹಕ್ಕು ಚ್ಯುತಿ ಮಂಡಿಸಿದರು.

ಅದಕ್ಕೆ ಪಕ್ಷಭೇದ ಮರೆತು ಎಲ್ಲ ಸದಸ್ಯರು ಬೆಂಬಲ ಸೂಚಿಸಿದರಲ್ಲದೆ, ಈ ಹಿಂದೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ವಿಧಾನ ಪರಿಷತ್ ಸದಸ್ಯರನ್ನು ಅವಮಾನಿಸಿದಾಗ ವಾಗ್ದಂಡನೆ ವಿಧಿಸಿದ ಪ್ರಕರಣ ನೆನಪಿಸಿದರು. ಅಲ್ಲದೆ, ಹೊರಟ್ಟಿ ಅವರಿಗೆ ಅವಮಾನಿಸಿದ ಅಧಿಕಾರಿಗಳ ವಾಗ್ದಂಡನೆ ಆಗ್ರಹಿಸಿದರು.

ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಅವರು ಈ ಹಕ್ಕುಚ್ಯುತಿಯನ್ನು ಹಕ್ಕು ಭಾದ್ಯತಾ ಸಮಿತಿಗೆ ವರ್ಗಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT