ಶನಿವಾರ, ಫೆಬ್ರವರಿ 29, 2020
19 °C

ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇದೇ 17ರಿಂದ 20ರವರೆಗೆ ವಿಧಾನ ಮಂಡಲದ ಜಂಟಿ ಅಧಿವೇಶನ ಜರುಗಲಿದ್ದು, ಇದರ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

‘ಜಂಟಿ ಅಧಿವೇಶನದ ಪ್ರಯುಕ್ತ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘ-ಸಂಸ್ಥೆಗಳ ಕಾರ್ಯಕರ್ತರು ಪ್ರತಿಭಟನೆ, ಧರಣಿ, ವಿಧಾನಸೌಧ ಮುತ್ತಿಗೆ, ಸತ್ಯಾಗ್ರಹ, ಮೆರವಣಿಗೆ ನಡೆಸುವ ಸಾಧ್ಯತೆ ಇದೆ. ಈ ರೀತಿಯಾದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಲಿದೆ. ಹೀಗಾಗಿ, ಫೆ. 17ರ ಬೆಳಿಗ್ಗೆ 6 ಗಂಟೆಯಿಂದ 20ರ ತಡರಾತ್ರಿ 12 ಗಂಟೆವರೆಗೆ ವಿಧಾನಸೌಧದ 2 ಕಿ.ಮೀ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಆದೇಶದಲ್ಲಿ ಹೇಳಲಾಗಿದೆ.

‘5ಕ್ಕಿಂತ ಹೆಚ್ಚು ಜನ‌ ಗುಂಪು ಕಟ್ಟಿಕೊಂಡು ಸೇರುವಂತಿಲ್ಲ. ಮೆರವಣಿಗೆ ಅಥವಾ ಸಭೆ‌ ನಡೆಸುವಂತಿಲ್ಲ. ಪಟಾಕಿ ಸಿಡಿಸುವುದನ್ನೂ ನಿರ್ಬಂಧಿಸಲಾಗಿದೆ. ಅಪಾಯಕಾರಿ ಆಯುಧವನ್ನೂ ವಿಧಾನಸೌಧದ ಒಳಗೆ ತೆಗೆದುಕೊಂಡು ಹೋಗುವಂತಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದೂ ಆದೇಶದಲ್ಲಿ ಎಚ್ಚರಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು