ಸಾರಿಗೆ ನೌಕರರಿಂದ ವಿಧಾನಸೌಧ ಚಲೋ

ಸೋಮವಾರ, ಜೂಲೈ 22, 2019
27 °C

ಸಾರಿಗೆ ನೌಕರರಿಂದ ವಿಧಾನಸೌಧ ಚಲೋ

Published:
Updated:

ಬೆಂಗಳೂರು: ಸಾರಿಗೆ ಸಂಸ್ಥೆಗಳನ್ನು ಸರ್ಕಾರಕ್ಕೆ ವಿಲೀನ ಮಾಡಿಕೊಂಡು ಅಲ್ಲಿನ ನೌಕರರನ್ನೂ ಸರ್ಕಾರ ನೌಕರರೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿ ಇದೇ 16ರಂದು ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಪ್ರತಿಭಟನೆಗೆ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಬಲ ಸೂಚಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರದ ಆದೇಶದಂತೆ ಕಾರ್ಯ ನಿರ್ವಹಿಸುವ ಕೆಎಸ್‌ಆರ್‌ಟಿಸಿ ಸೇರಿ ನಾಲ್ಕೂ ಸಾರಿಗೆ ಸಂಸ್ಥೆಗಳ ನೌಕರರಿಗೆ ಯಾವುದೇ ಸೌಲಭ್ಯ ನೀಡದೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ಸರ್ಕಾರಿ ನೌಕರರಿಗೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನೂ ಈ ನೌಕರರಿಗೂ ನೀಡಬೇಕು’ ಎಂದು ಒತ್ತಾಯಿಸಿದರು. 

‘ಈ ಸಂಬಂಧ ಮುಖ್ಯಮಂತ್ರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಈಗಲೂ ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !