ಬುಧವಾರ, ಜೂನ್ 16, 2021
28 °C
ಪ್ರತಿ ಹಳ್ಳಿಯ ಮಕ್ಕಳಿಗೂ ಯೋಜನೆ ತಲುಪಲಿ– ಸಚಿವ ಸುರೇಶ್‌ಕುಮಾರ್‌

‘ಗುರುಕುಲ ಶಿಕ್ಷಣ ನೆನಪಿಸುವ ವಿದ್ಯಾಗಮ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿಯೂ ಮಕ್ಕಳು ಪಾಠ–ಪ್ರವಚನಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಿದ್ಯಾಗಮ ಯೋಜನೆ ಜಾರಿಗೆ ತಂದಿದ್ದು, ಇದು ಗುರುಕುಲ ಮಾದರಿ ಶಿಕ್ಷಣವನ್ನು ನೆನಪಿಸುತ್ತದೆ. ಇದರಿಂದ ನಮ್ಮ ಸಂಸ್ಕೃತಿಯ ಪುನರುತ್ಥಾನವಾದಂತಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಹೇಳಿದರು. 

ಈ ಯೋಜನೆ ಕುರಿತಂತೆ ರಾಜ್ಯದ ಎಲ್ಲ ಉಪನಿರ್ದೇಶಕರು, ಡಯಟ್‌ ಪ್ರಾಚಾರ್ಯರು, ಕ್ಷೇತ್ರಶಿಕ್ಷಣಾಧಿಕಾರಿಗೊಂದಿಗೆ ಶುಕ್ರವಾರ ವಿಡಿಯೊ ಸಂವಾದ ನಡೆಸಿದ ಅವರು, ‘ಪ್ರತಿ ಹಳ್ಳಿಯ ಮಕ್ಕಳಿಗೂ ಈ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖವಾಗಬೇಕು’ ಎಂದು ಸೂಚಿಸಿದರು. 

‘ಎಲ್ಲ ಮಕ್ಕಳಿಗೂ ತಂತ್ರಜ್ಞಾನಾಧಾರಿತ ಶಿಕ್ಷಣ ದೊರೆಯುವಂತೆ ಮಾಡುವುದು ಮತ್ತು ಶಿಕ್ಷಕರು ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುವ ಮೂಲಕ ಮಕ್ಕಳ ಮನೋಸ್ಥೈರ್ಯವನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶ’ ಎಂದರು. 

‘ಕಲಿಕೆಯಲ್ಲಿ ವಿಳಂಬವಾದರೆ, ಶಾಲೆ ತೊರೆಯುವ ಮಕ್ಕಳ ಸಂಖ್ಯೆ ಹೆಚ್ಚುತ್ತದೆ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧಂತಿಯಂತ ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆಯೂ ಇದೆ. ಇದಕ್ಕೆ ಅವಕಾಶ ಕೊಡಬಾರದು ಎಂಬ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದದೆ’ ಎಂದರು. 

‘ಮೊಬೈಲ್‌ ಫೋನ್‌, ಟಿವಿ ಮೂಲಕ, ಪಡಸಾಲೆಗಳಲ್ಲಿ, ಶಾಲಾ ಆವರಣಗಳಲ್ಲಿ, ಮರಗಳ ನೆರಳಿನಲ್ಲಿ ನಡೆಸಬಹುದಾದ ಈ ತರಗತಿಗಳಿಗೆ ಅನುಕೂಲವಾಗುವಂತೆ ಶಿಕ್ಷಕರು ಕಲಿಕಾ ಸಾಮಗ್ರಿಗಳನ್ನು ರೂಪಿಸಿಕೊಳ್ಳಬೇಕು. ನಮ್ಮ ಇಲಾಖೆಗಾಗಿಯೇ ಪ್ರತ್ಯೇಕ ಎರಡು ದೂರದರ್ಶನ ಚಾನೆಲ್‌ಗಳನ್ನು ಕೇಳಿದ್ದು, ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿದಿದೆ’ ಎಂದೂ ಅವರು ತಿಳಿಸಿದರು.

ವಿಧಾನಪರಿಷತ್ ಸದಸ್ಯರೊಂದಿಗೆ ಸಂವಾದ:

ಈ ಯೋಜನೆಯ ಅನುಷ್ಠಾನ ಕುರಿತಂತೆ, ರಾಜ್ಯದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರೊಂದಿಗೆ ವೆಬಿನಾರ್ ಮೂಲಕ ಸಚಿವರು ಸಂವಾದ ನಡೆಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು