ಭಾನುವಾರ, ನವೆಂಬರ್ 29, 2020
20 °C

ಮಲ್ಯ ಸಾಲಕ್ಕೆ ಯುನೈಟೆಡ್‌ ಸ್ಪಿರಿಟ್ ಕಂಪನಿ ಹೊಣೆಯಲ್ಲ: ಹಿರಿಯ ವಕೀಲ ಪಿ.ಚಿದಂಬರಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಉದ್ಯಮಿ ವಿಜಯ್ ಮಲ್ಯ ಒಡೆತನದ ಕಿಂಗ್ ಫಿಷರ್ ವಿಮಾನಯಾನ ಕಂಪನಿ ಪಡೆದಿರುವ ಸಾಲಕ್ಕೆ ಯುನೈಟೆಡ್‌ ಸ್ಪಿರಿಟ್ ಲಿಮಿಟೆಡ್ (ಯುಎಸ್ಎಲ್) ಕಂಪನಿ ಹೊಣೆಯಾಗುವುದಿಲ್ಲ’ ಎಂದು  ಹಿರಿಯ ವಕೀಲ ಪಿ. ಚಿದಂಬರಂ ಹೈಕೋರ್ಟ್ ಗೆ ತಿಳಿಸಿದರು.

‘ಸಾಲ ತೀರಿಸಿದ್ದರೂ ನಮಗೆ ಇನ್ನೂ ಋಣಮುಕ್ತ ಪತ್ರ ನೀಡಿಲ್ಲ’ ಎಂದು ಆಕ್ಷೇಪಿಸಿ ಐಡಿಬಿಐ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿರುದ್ದ ಯುಎಸ್ಎಲ್ ಕಂಪನಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಯುಎಸ್ಎಲ್ ಕಂಪನಿ ಪರ ವಾದ ಮಂಡಿಸಿದ ಚಿದಂಬರಂ, ‘ಮಲ್ಯ ಯುಎಸ್ಎಲ್ ಕಂಪನಿಗೆ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ  ಸಾಲ ಪಡೆಯಲಾಗಿತ್ತು ಮತ್ತು ಅದನ್ನು ಈಗಾಗಲೇ ತೀರಿಸಲಾಗಿದೆ. ಆದರೆ, ಮಲ್ಯ ಕಿಂಗ್ ಫಿಷರ್ ಕಂಪನಿಯಲ್ಲಿ ಸಾಲ ಪಡೆದಿದ್ದಾರೆ. ಅವರು ಅಧ್ಯಕ್ಷರಾಗಿದ್ದ ಕಾರಣಕ್ಕೆ ಸಾಲ ನೀಡಲಾಗಿತ್ತು ಎಂಬ ಬ್ಯಾಂಕ್ ವಾದ ಸಮರ್ಥನೀಯವಲ್ಲ ಮತ್ತು ಈ ಕಾರಣಕ್ಕಾಗಿಯೇ ಇನ್ನೂ ಋಣಮುಕ್ತ ಪತ್ರ ನೀಡುತ್ತಿಲ್ಲ’ ಎಂದು ಆಕ್ಷೇಪಿಸಿದರು.

ಚಿದಂಬರಂ ವಾದವನ್ನು ಅಲ್ಲಗಳೆದ ಬ್ಯಾಂಕ್ ‌ಪರ ವಕೀಲ ಎಲ್.ವಿ.ಶ್ರೀನಿವಾಸ್ ಅವರು, ‘ಸಾಲ ನೀಡುವಾಗ ಮಲ್ಯ ಯುಎಸ್ ಎಲ್ ಕಂಪನಿಯ ಅಧ್ಯಕ್ಷರಾಗಿದ್ದರು ಎಂಬ ಕಾರಣಕ್ಕಾಗಿಯೇ ಸಾಲ ನೀಡಲಾಗಿದೆ. ಈಗ ಅವರು ಆ ಸ್ಥಾನದಲ್ಲಿ ಇಲ್ಲ ಎಂದಾಕ್ಷಣ  ಅಂದಿನ ಪ್ರಕರಣದಿಂದ ಬಚಾವಾಗಲು ಸಾಧ್ಯವಿಲ್ಲ. ಶೇರು ಮಾರುಕಟ್ಟೆಯಲ್ಲಿ ಅಂದು ಕಂಪನಿಯು ಬ್ರಾಂಡ್ ವ್ಯಾಲ್ಯೂ ನೋಡಿಯೇ ಸಾಲ ನೀಡಲಾಗಿತ್ತು’ ಎಂದು ತಿಳಿಸಿದರು.

ವಿಚಾರಣೆಯನ್ನು 2019ರ ಜನವರಿ 3ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು