ಸೋಮವಾರ, ಏಪ್ರಿಲ್ 19, 2021
23 °C

ಬೈಕ್‌ನಲ್ಲಿ ಹಿಂಬಾಲಿಸಿ ಮೊಬೈಲ್ ಕಳವು:ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೈಕ್‌ನಲ್ಲಿ ಹಿಂಬಾಲಿಸಿ, ಸಾರ್ವಜನಿಕರಿಂದ ಮೊಬೈಲ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.

ನೆಲಮಂಗಲ ಟೌನ್‌ ನಿವಾಸಿ ಮಹಮದ್ ಸೂಫಿಯಾನ್ (20) ಬಂಧಿತ ಆರೋಪಿ.

ಮಾ.11ರಂದು ವಿಜಯನಗರದ 9ನೇ ಅಡ್ಡರಸ್ತೆಯ ಮೆಡಿಕಲ್ ಶಾಪ್ ಮುಂಭಾಗ ನಡೆದುಕೊಂಡು ಹೋಗುತ್ತಿದ್ದ ದಂಪತಿಯನ್ನು ಆರೋಪಿ ಹಿಂಬಾಲಿಸಿದ್ದ. ಬಳಿಕ ಮಹಿಳೆಯ ಕೈಯಲ್ಲಿದ್ದ ಮೊಬೈಲ್‌ ಕಸಿದು ಅಲ್ಲಿಂದ ಪರಾರಿಯಾಗಿದ್ದ. ಈ ಸಂಬಂಧ ವಿಜಯನಗರ ಪೊಲೀಸರಿಗೆ ಪತಿ ದೂರು ನೀಡಿದ್ದರು.

‘ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಗರದ ವಿವಿಧ ಭಾಗಗಳಲ್ಲಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ವಿಚಾರವನ್ನು ತಿಳಿಸಿದ್ದ. ಈ ಸಂಬಂಧ ಆರೋಪಿಯಿಂದ ₹75 ಸಾವಿರ ಬೆಲೆ ಬಾಳುವ ಐದು ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.  

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು