ಮಂಗಳವಾರ, ನವೆಂಬರ್ 19, 2019
22 °C

ವಿಜಯಶಂಕರ್‌ ನಾಳೆ ಬಿಜೆಪಿ ಸೇರ್ಪಡೆ?

Published:
Updated:
Prajavani

ಮೈಸೂರು: ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಸಿ.ಎಚ್‌.ವಿಜಯಶಂಕರ್‌ ಮಂಗಳವಾರ ಬಿಜೆಪಿ ಸೇರುವ ಸಾಧ್ಯತೆಯಿದೆ.

ಈ ಸಂಬಂಧ ಅವರು ಈಗಾಗಲೇ ಹುಣಸೂರು ಮತ್ತು ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಬಲಿಗರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅವರು ಪಕ್ಷ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆಯಲ್ಲಿ ಮೈಸೂರು–ಕೊಡಗು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಜಯಶಂಕರ್‌, ಬಿಜೆಪಿಯ ಪ್ರತಾಪಸಿಂಹ ಎದುರು ಸೋಲು ಕಂಡಿದ್ದರು.

ಪ್ರತಿಕ್ರಿಯಿಸಿ (+)