ಬುಧವಾರ, ಡಿಸೆಂಬರ್ 8, 2021
26 °C

ಸರ್ಕಾರಿ ದರದಲ್ಲಿ ಕೋವಿಡ್‌ ಪರೀಕ್ಷೆಗೆ ಒಪ್ಪಿದ ವಿಕ್ರಮ್ ಆಸ್ಪತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್‌ ಪರೀಕ್ಷೆಗೆ ಒಳಗಾಗುವವರಿಂದ ಸರ್ಕಾರ ನಿಗದಿಪಡಿಸಿದಷ್ಟೇ ದರ ವಸೂಲಿ ಮಾಡಲು ಹಾಗೂ ಇದುವರೆಗೆ ವಸೂಲಿ ಮಾಡಿರುವ ಹೆಚ್ಚುವರಿ ಮೊತ್ತವನ್ನು ಹಿಂತಿರುಗಿಸಲು ವಿಕ್ರಮ್‌ ಆಸ್ಪತ್ರೆ ಒಪ್ಪಿದೆ.

ಕೋವಿಡ್ ಪರೀಕ್ಷೆಗೆ ಸರ್ಕಾರ ನಿಗದಿ ಪಡಿಸಿದ್ದಕ್ಕಿಂತ ಅಧಿಕ ಶುಲ್ಕ ಪಡೆಯಲಾಗುತ್ತಿದೆ ಎಂಬ ದೂರುಗಳು ಬಂದಿದ್ದರಿಂದ ಖಾಸಗಿ ಆಸ್ಪತ್ರೆಗಳ ಉಸ್ತುವಾರಿ ಅಧಿಕಾರಿಗಳ ತಂಡವು ಇತ್ತೀಚೆಗೆ ವಿಕ್ರಮ್‌ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಆಸ್ಪತ್ರೆಯವರು ಹೆಚ್ಚುವರಿ ಹಣ ಪಡೆದಿರುವುದು ಈ ವೇಳೆ ದೃಢಪಟ್ಟಿತ್ತು. ಹೆಚ್ಚುವರಿ ಮೊತ್ತವನ್ನು ಮರಳಿಸುವಂತೆ ಅಧಿಕಾರಿಗಳ ತಂಡ ಸೂಚಿಸಿತ್ತು.

‘ಒಟ್ಟು 44 ಮಂದಿಗೆ ಸಿಬಿ ಎನ್‌ಎಎಟಿ ಪರೀಕ್ಷೆ ನಡೆಸಿದ್ದೇವೆ. ಇವರಿಂದ ಪಡೆದಿರುವ ₹ 3ಸಾವಿರಕ್ಕಿಂತ ಹೆಚ್ಚುವರಿ ಹಣವನ್ನು ನಮಗೆ ನಷ್ಟವಾದರೂ ಮರಳಿಸುತ್ತೇವೆ’ ಎಂದು ಆಸ್ಪತ್ರೆಯ ನೋಡಲ್‌ ಅಧಿಕಾರಿಯವರು ಖಾಸಗಿ ಆಸ್ಪತ್ರೆಗಳ ಉಸ್ತುವಾರಿಯಾಗಿರುವ ಹಿರಿಯ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸಿನ್‌ ಅವರಿಗೆ ಪತ್ರ ಬರೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು