ಬೆಂಗಳೂರು: ಬಳ್ಳಾರಿಯ ’ವಿಮ್ಸ್’ ನಲ್ಲಿ ಎಂಬಿಬಿಎಸ್ ಕೋರ್ಸ್ಗೆ ಇದೇ ಶೈಕ್ಷಣಿಕ ವರ್ಷದಿಂದ 50 ಹೆಚ್ಚುವರಿ ಸೀಟುಗಳು ಲಭ್ಯವಾಗಲಿವೆ.
ಎಂಬಿಬಿಎಸ್ ಸೀಟುಗಳನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಸರ್ಕಾರ ನಾಲ್ಕು ಹೊಸ ವೈದ್ಯಕೀಯ ಕಾಲೇಜು ಹಾಗೂ 750 ಎಂಬಿಬಿಎಸ್ ಸೀಟುಗಳನ್ನು ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.