ಬೆಂಗಳೂರು: ಕಚೇರಿಯ ಗೋದಾಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಮರಣೋತ್ತರ ಪರೀಕ್ಷಾ ವರದಿಯು ಬುಧವಾರ ಹೆಣ್ಣೂರು ಠಾಣೆ ಪೊಲೀಸರ ಕೈಸೇರಿದೆ. ವರದಿ ಆಧರಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ನಾಗವಾರದ ಖಾಸಗಿ ಕಂಪನಿಯೊಂದರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವಿನಯ್ ಅವರು ಏಪ್ರಿಲ್ 4ರಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

‘ವಿನಯ್ ಅವರು ಮೃತಪಟ್ಟ ನಿಖರವಾದ ಸಮಯ, ಮೃತದೇಹ ಯಾವ ಸ್ಥಿತಿಯಲ್ಲಿತ್ತು ಎಂಬುದನ್ನು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ವರದಿಯನ್ನು ವಿಶ್ಲೇಷಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.
.ಆತ್ಮಹತ್ಯೆ ಮಾಡಿಕೊಂಡ ವಿನಯ್ ಸೋಮಯ್ಯ ಯಾರು?.
‘ವಿನಯ್ ಅವರ ಮೊಬೈಲ್, ಲ್ಯಾಪ್ಟಾಪ್ ಹಾಗೂ ಅವರು ಬರೆದಿದ್ದರು ಎನ್ನಲಾದ ಮರಣ ಪತ್ರವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ರವಾನೆ ಮಾಡಲಾಗಿತ್ತು. ಎರಡು ದಿನಗಳ ಒಳಗಾಗಿ ಎಫ್ಎಸ್ಎಲ್ ವರದಿ ಬರುವ ಸಾಧ್ಯತೆಯಿದೆ. ವರದಿ ಬಂದ ಬಳಿಕವಷ್ಟೇ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದ ಮರಣ ಪತ್ರದ ನೈಜತೆ ಗೊತ್ತಾಗಲಿದೆ. ಏಪ್ರಿಲ್ 4ರಂದು ಬೆಳಿಗ್ಗೆ 4.22ರ ಸುಮಾರಿಗೆ ವಿನಯ್ ಮೊಬೈಲ್ನಿಂದ ಕೊನೆಯ ಸಂದೇಶ ರವಾನೆ ಆಗಿತ್ತು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
.Vinay Somaiah Suicide Case| ವಿನಯ್ ಸೋಮಯ್ಯ ಮರಣ ಪತ್ರ: ತನಿಖೆ ಶುರು.
‘ವಿನಯ್ ಆತ್ಮಹತ್ಯೆ ಪ್ರಕರಣದಲ್ಲಿ ಕಿರುಕುಳ ನೀಡಿದ್ದ ಆರೋಪದ ಅಡಿ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಬರುವಂತೆ ನೋಟಿಸ್ನಲ್ಲಿ ಸೂಚಿಸಲಾಗಿದೆ. ತೆನ್ನಿರ ಮೈನಾ ಅವರು ತಲೆಮರೆಸಿಕೊಂಡಿದ್ದು ಸಂಪರ್ಕಕ್ಕೆ ಸಿಗುತ್ತಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
.ವಿನಯ್ ಸೋಮಯ್ಯ ಆತ್ಮಹತ್ಯೆ | ಬಿಜೆಪಿ ಹೆಣದ ರಾಜಕೀಯ: ಕಾಂಗ್ರೆಸ್ ಆರೋಪ.
‘ಪ್ರಕರಣದ ಸಂಬಂಧ ವಿನಯ್ ಅವರ ಕುಟುಂಬಸ್ಥರಿಂದಲೂ ಮಾಹಿತಿ ಪಡೆದುಕೊಳ್ಳಬೇಕಿದೆ. ಸದ್ಯದಲ್ಲೇ ಅವರ ಕುಟುಂಬಸ್ಥರು ಹಾಗೂ ಕಚೇರಿ ಸಿಬ್ಬಂದಿಯಿಂದಲೂ ಹೇಳಿಕೆ ದಾಖಲಿಸಿಕೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.
.ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತಲೆಮರೆಸಿಕೊಂಡ ತೆನ್ನಿರ ಮೈನಾ.ವಿನಯ್ ಸೋಮಯ್ಯ ಆತ್ಮಹತ್ಯೆ: ಪೊನ್ನಣ್ಣ, ಮಂಥರ್ಗೌಡ ಹೆಸರು ಕೈಬಿಟ್ಟು ಕೇಸ್ ದಾಖಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.