ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಮತದಾನ ಜಾಗೃತಿಗಾಗಿ ವಿಂಟೇಜ್ ಕಾರ್, ಬೈಕ್‌ ರ‍್ಯಾಲಿ

Published 31 ಮಾರ್ಚ್ 2024, 16:15 IST
Last Updated 31 ಮಾರ್ಚ್ 2024, 16:15 IST
ಅಕ್ಷರ ಗಾತ್ರ

ಬೆಂಗಳೂರು: ಮತದಾನದ ಜಾಗೃತಿಗಾಗಿ ಭಾನುವಾರ ವಿಂಟೇಜ್‌ ಕಾರ್ ಮತ್ತು ಬೈಕ್‌ಗಳ ರ‍್ಯಾಲಿ ನಡೆಯಿತು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿ, ‘ಲೋಕಸಭಾ ಚುನಾವಣೆಯ ಮತದಾನವು ಇದೇ ಏಪ್ರಿಲ್ 26 ರಂದು ನಡೆಯಲಿದ್ದು, ವಿವಿಧ ಯೋಜನೆಗಳನ್ನು ರೂಪಿಸಿಕೊಂಡು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ’ ಎಂದು ಹೇಳಿದರು.

ನಗರ ವ್ಯಾಪ್ತಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮತದಾನ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ತಳಮಟ್ಟದಲ್ಲಿ ಯೋಜನೆಗಳನ್ನು ರೂಪಿಸಿಕೊಂಡು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ರ‍್ಯಾಲಿಯಲ್ಲಿ ಭಾಗವಹಿಸಿದವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ರ‍್ಯಾಲಿಯು ವಿಧಾನಸೌಧ ಗ್ರ‍್ಯಾಂಡ್ ಸ್ಟೆಪ್ಸ್‌ನಿಂದ ಪ್ರಾರಂಭವಾಗಿ ಇನ್‌ಫೆಂಟ್ರಿ ರಸ್ತೆ, ಎಂ.ಜಿ ರಸ್ತೆ (ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಮೂಲಕ), ಟ್ರಿನಿಟಿ ವೃತ್ತ, ರೆಸಿಡೆನ್ಸಿ ರಸ್ತೆ ಮೂಲಕ ಕಂಠೀರವ ಕ್ರೀಡಾಂಗಣಕ್ಕೆ ತಲುಪಿ ಮುಕ್ತಾಯಗೊಂಡಿತು.

ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT