ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯನಗರ: ವಿಂಟೇಜ್‌ ಕಾರ್‌ ರ‍್ಯಾಲಿ

ಮಾದಕ ಪದಾರ್ಥ ಸೇವನೆ ವಿರುದ್ಧದ ಜಾಗೃತಿಗೆ ಉಪಮಖ್ಯಮಂತ್ರಿ ಚಾಲನೆ
Last Updated 9 ಸೆಪ್ಟೆಂಬರ್ 2018, 10:05 IST
ಅಕ್ಷರ ಗಾತ್ರ

ಬೆಂಗಳೂರು: ಮಾದಕ ಪದಾರ್ಥ ಸೇವನೆ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಜಯನಗರದಲ್ಲಿ ಏರ್ಪಡಿಸಿದ್ದ ವಿಂಟೇಜ್ ಕಾರ್‌ ರ‌್ಯಾಲಿಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಚಾಲನೆ ನೀಡಿದರು.

‘ಮಾದಕ ದ್ರವ್ಯ ಸೇವನೆಯ ಚಟಕ್ಕೆ ಬಿದ್ದ ಯುವಕರು ಇಡೀ ಜೀವನವನ್ನೇ ಕಳೆದುಕೊಳ್ಳುತ್ತಿದ್ದಾರೆ. ನಗರದಲ್ಲಿ‌ ಡ್ರಗ್ ಸೇವನೆ ವಿರುದ್ಧ ದೊಡ್ಡ ಆಂದೋಲನವನ್ನೇ ಪ್ರಾರಂಭಿಸಿದ್ದೇವೆ. ಪೊಲೀಸ್ ಇಲಾಖೆ ವತಿಯಿಂದಲೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.

‘ಮಕ್ಕಳು ದಾರಿ ತಪ್ಪದಂತೆ ಪೋಷಕರು ಹಾಗೂ ಶಿಕ್ಷಕರು ನಿಗಾ ವಹಿಸಬೇಕು’ ಎಂದು ಕಿವಿಮಾತು ಹೇಳಿದರು.

‘ಬಿಜೆಪಿಗೆ ಹೊಟ್ಟೆ ಉರಿ’
‘ಸಮ್ಮಿಶ್ರ ಸರ್ಕಾರ ಸುಲಲಿತವಾಗಿ ಆಡಳಿತ ನಡೆಸುತ್ತಿರುವುದು ಬಿಜೆಪಿ ಅವರಿಗೆ ಹೊಟ್ಟೆ ಉರಿ ತರಿಸಿದೆ. ಹೀಗಾಗಿ ಅವರು ಸರಕಾರದ ಬಗ್ಗೆ ಅನಗತ್ಯ ಹೇಳಿಕೆ ನೀಡುತ್ತಾರೆ. ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ’ ಎಂದು ಪರಮೇಶ್ವರ ಹೇಳಿದರು.

‘ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐನಂಥ ಕೇಂದ್ರ ತನಿಖಾ ಸಂಸ್ಥೆಗಳನ್ನು‌ ದುರುಪಯೋಗ ಪಡಿಸಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT