ಅರ್ಜಿದಾರರ ಪರ ವಕೀಲ ಎಸ್.ಎ.ಅಹಮದ್ ವಾದ ಮಂಡಿಸಿ,‘ರಿಜ್ವಾನ್ ಧಾರ್ಮಿಕ ಆಧಾರದಲ್ಲಿ ಮತಯಾಚನೆ ಮಾಡಿಲ್ಲ. ಈ ಸಂಬಂಧಅರ್ಜಿದಾರರ ವಿರುದ್ಧ ಹೊರಿಸಲಾಗಿರುವ ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 171, 171ಐ ಮತ್ತು ಜನತಾ ಪ್ರತಿನಿಧಿ ಕಾಯ್ದೆ–1951ರ ಕಲಂ 133ರ ಅನ್ವಯ ದಾಖಲಾಗಿರುವ ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿಯೂ ಮೇಲ್ನೋಟಕ್ಕೆ ಯಾವುದೇ ಸಾಕ್ಷ್ಯ ಕಂಡುಬರುವುದಿಲ್ಲ. ಆದ್ದರಿಂದ, ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ಕೋರಿದ್ದರು. ಇದನ್ನು ಮಾನ್ಯ ಮಾಡಿರುವ ನ್ಯಾಯಪೀಠ, ಎಫ್‌ಐಆರ್ ಮತ್ತು ವಿಚಾರಣಾ ನ್ಯಾಯಾಲಯದಲ್ಲಿನ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.