ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಸಂಹಿತೆ ಉಲ್ಲಂಘನೆ ಆರೋಪ: ರಿಜ್ವಾನ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Last Updated 13 ಜುಲೈ 2022, 2:51 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಕೇಂದ್ರ (ಸೆಂಟ್ರಲ್) ಲೋಕಸಭಾ ಕ್ಷೇತ್ರಕ್ಕೆ 2019ರಲ್ಲಿ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಿಜ್ವಾನ್ ಅರ್ಷದ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ‌ ನೀಡಿದೆ.

ಈ ಕುರಿತಂತೆ ಮೆಯೊಹಾಲ್ ಕೋರ್ಟ್ ಸಂಖ್ಯೆ 43ರಲ್ಲಿ ದಾಖಲಾಗಿರುವ ಎಫ್‌ಐಆರ್ ಮಮತ್ತು ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ |
ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ವಕೀಲ ಎಸ್.ಎ. ಅಹಮದ್ ಅವರು, ‘ಕಾನೂನುಬಾಹಿರವಾಗಿ ದಾಖಲಾಗಿರುವ ಈ ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಪ್ರಕರಣವೇನು?: ‘ದೊಡ್ಡನೆಕ್ಕುಂದಿ ಗ್ರಾಮದ ಕೋದಂಡರಾಮ ಸರ್ಕಲ್ ದೇವಾಲಯದಲ್ಲಿ 2019ರ ಏಪ್ರಿಲ್ 13ರಂದು ನಡೆಯುತ್ತಿದ್ದ ಶ್ರೀರಾಮನವಮಿ ಪಲ್ಲಕ್ಕಿ ಉತ್ಸವದ ವೇಳೆ ಅನುಮತಿ ಪಡೆಯದೆ ರಿಜ್ವಾನ್ ಅರ್ಷದ್ ಚುನಾವಣಾ ಪ್ರಚಾರದ ಅಂಗವಾಗಿ ರೋಡ್ ಶೋ ನಡೆಸಿದರು’ ಎಂದು ಆರೋಪಿಸಿ ಚುನಾವಣಾ ಅಧಿಕಾರಿಗಳು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT