ಬೆಂಗಳೂರು: ‘ಮಹಿಳೆಯ ಮೇಲೆ ದೌರ್ಜನ್ಯವೆಸಗಿರುವ ಮಾದಕನಾಯಕನ ಹಳ್ಳಿ ಹಾಗೂ ನೆಲಮಂಗಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ಗಳ ವಿರುದ್ಧ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಆಗ್ರಹಿಸಿದೆ.

ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದು, ‘ವಿಡಿಯೊ ಚಿತ್ರೀಕರಣ ಮಾಡುತ್ತಿದ್ದ ಮಹಿಳೆಯೊಬ್ಬರ ಮೊಬೈಲ್ ಕಸಿದುಕೊಂಡು, ಸಾರ್ವಜನಿಕವಾಗಿ ನಡು ರಸ್ತೆಯಲ್ಲಿ ಎಳೆದುಕೊಂಡು ಹೋಗಿ ದೌರ್ಜನ್ಯವೆಸಗಿದ್ದಾರೆ. ಇದನ್ನು ಆಯೋಗ ಖಂಡಿಸುತ್ತದೆ’ ಎಂದಿದ್ದಾರೆ.

‘ಅನ್ಯಾಯಕ್ಕೆ ಒಳಗಾದ ರೈತರ ಪರವಾಗಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಕಾರ್ಯಕರ್ತರು ನ್ಯಾಯ ಕೇಳಲು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ತೆರಳಿದ್ದರು. ಸುಳ್ಳು ಪ್ರಕರಣದಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿದ್ದ ಕೆಆರ್ಎಸ್ ಕಾರ್ಯಕರ್ತರಿಗೆ ನೆಲಮಂಗಲ ಠಾಣೆಯ ಇನ್ಸ್ಪೆಕ್ಟರ್ ನರೇಂದ್ರ ಬಾಬು ಮೊಬೈಲ್ ಕಸಿದುಕೊಂಡು ಬೆದರಿಕೆ ಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದವರ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಂಡು ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು’ ಎಂದು ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.