ಬೆಂಗಳೂರು: ನಗರದ ಪಿಇಎಸ್ ಪದವಿ ಪೂರ್ವ ಕಾಲೇಜು ವತಿಯಿಂದ ‘ವಿರಿಂಚಿ 2024’ ಅಂತರ ಕಾಲೇಜು ಸ್ಪರ್ಧೆಗೆ ಶುಕ್ರವಾರ ಚಾಲನೆ ನೀಡಲಾಯಿತು.
ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ವಿಶ್ವವಿದ್ಯಾಲಯದ ಡೀನ್ ಶೈಲಶ್ರೀ ಹರಿದಾಸ್, ‘ವಿದ್ಯಾರ್ಥಿಗಳು ನಾಯಕತ್ವ ಗುಣ ಅಳವಡಿಸಿಕೊಳ್ಳಬೇಕು. ಏನಾದರೂ ಸಾಧನೆ ಮಾಡಬೇಕೆಂಬ ಮನೋಭಾವ ಇರುತ್ತದೆ. ಸ್ಪರ್ಧೆಯಲ್ಲಿ ಸೋಲು–ಗೆಲುವು ಸಹಜ. ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು’ ಎಂದರು.
ವಿದ್ಯಾಸಂಸ್ಥೆ ನಿರ್ದೇಶಕ ಪ್ರೊ. ಎಂ.ವಿ.ಸತ್ಯನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಸಿ.ನಾರಾಯಣ ಹಾಜರಿದ್ದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.