ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಶ್ವಕರ್ಮ ಸಮಾಜಕ್ಕೆ ಅಗತ್ಯ ಉತ್ತೇಜನ: ಸಚಿವ ದಿನೇಶ್ ಗುಂಡೂರಾವ್ ಅಭಿಮತ

Published : 27 ಸೆಪ್ಟೆಂಬರ್ 2024, 16:09 IST
Last Updated : 27 ಸೆಪ್ಟೆಂಬರ್ 2024, 16:09 IST
ಫಾಲೋ ಮಾಡಿ
Comments

ಬೆಂಗಳೂರು: ‘ಶ್ರಮಶಕ್ತಿಯನ್ನು ಉಳಿಸಿ, ಬೆಳೆಸಿಕೊಂಡು ಬಂದಿರುವ ವಿಶ್ವಕರ್ಮರು ಮಹಾ ಪ್ರತಿಭಾನ್ವಿತರು. ಈ ಸಮಾಜದವರೇ ಜಗತ್ತಿನ ಮೊದಲ ಎಂಜಿನಿಯರ್‌ಗಳು’ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದರು.

ವಿಶ್ವಕರ್ಮ ಸೇವಾ ಪ್ರತಿಷ್ಠಾನವು ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವಿರಾಟ್ ವಿಶ್ವಕರ್ಮ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸಮಾಜದಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ. ಪ್ರತಿಯೊಬ್ಬರಿಗೂ ಬೆಳೆಯಲು ಅವಕಾಶವಿದೆ. ಎಲ್ಲ ಸಮುದಾಯಗಳಿಗೆ ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ಸಿಗುವಂತಾಗಬೇಕು. ವಿಶ್ವಕರ್ಮ ಸಮಾಜಕ್ಕೆ ಅಗತ್ಯ ಉತ್ತೇಜನ ನೀಡಲು ಸರ್ಕಾರ ಬದ್ಧವಾಗಿದೆ’ಎಂದು ಭರವಸೆ ನೀಡಿದರು. 

ರಾಜ್ಯಸಭಾ ಸದಸ್ಯ ಜಗ್ಗೇಶ್ ಮಾತನಾಡಿ, ‘ಕುಲದ ನೆಲೆಯನ್ನು ಎಲ್ಲರೂ ಗೌರವಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡಬೇಕು. ಸಮುದಾಯದ ನೊಂದವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರೂಪಿಸಿರುವ ವಿಶ್ವಕರ್ಮ ಯೋಜನೆ ಅತ್ಯುತ್ತಮವಾಗಿದೆ. ಈ ಯೋಜನೆಗೆ ₹ 13 ಸಾವಿರ ಕೋಟಿ ಮೀಸಲಿರಿಸಿದ್ದಾರೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಬಿ.ಎಂ.ಉಮೇಶ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಧಕರಿಗೆ ವಿಶ್ವಕರ್ಮ ಶ್ರೀ, ವಿಶ್ವಕರ್ಮ ಸೇವಾ ರತ್ನ ಸೇರಿ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಗಾಯನ, ನೃತ್ಯ ಸಹಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT