ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಜಾಪ್ರಭುತ್ವದ ಯಶಸ್ಸಿಗೆ ಮಾಧ್ಯಮ ಅಗತ್ಯ’

Last Updated 31 ಡಿಸೆಂಬರ್ 2018, 19:59 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತಮ ಸಮಾಜ ನಿರ್ಮಾಣಕ್ಕೆ, ಪ್ರಜಾಪ್ರಭುತ್ವದ ಆಶೋತ್ತರಗಳ ಸಾಕಾರಕ್ಕೆ ಮಾಧ್ಯಮ ಕ್ಷೇತ್ರ ಕೂಡ ನ್ಯಾಯಾಂಗದಂತೆ ಸ್ವತಂತ್ರವಾಗಿ, ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಅಗತ್ಯವಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿಪಿ. ವಿಶ್ವನಾಥಶೆಟ್ಟಿ ಪ್ರತಿಪಾದಿಸಿದರು.

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 70ನೇ ವರ್ಷದ ವಿಶೇಷ ಲಾಂಛನ ಮತ್ತು ನೂತನ ವರ್ಷದ ಕ್ಯಾಲೆಂಡರ್‌ ಅನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

‘ಮಾಧ್ಯಮ ಮತ್ತು ನ್ಯಾಯಾಂಗ ಒಂದಕ್ಕೊಂದು ಪೂರಕವಾಗಿ ಹೊಂದಿಕೊಂಡು ತಮ್ಮ ಕರ್ತವ್ಯ ನಿರ್ವಹಿಸಿದರೆ ಪ್ರಜಾಪ್ರಭುತ್ವದ ಯಶಸ್ಸು ಸಾಧ್ಯ. ಅದರಿಂದ ದುರಾಡಳಿತ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದು’ ಎಂದು ಅವರು ಅಭಿಪ್ರಾಯಪಟ್ಟರು.

ಸಂಘದ ಅಧ್ಯಕ್ಷ ಎಂ.ಎಸ್. ರಾಜೇಂದ್ರಕುಮಾರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT