ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಲಾಪದಲ್ಲಿ ಸಚಿವರ ಕಡ್ಡಾಯ ಹಾಜರಾತಿ: ಕಾಗೇರಿ ಪತ್ರ

Last Updated 31 ಆಗಸ್ಟ್ 2021, 23:21 IST
ಅಕ್ಷರ ಗಾತ್ರ

ಬೆಂಗಳೂರು: ಸೆ.13 ರಿಂದ ನಡೆಯುವ ವಿಧಾನಸಭೆ ಅಧಿವೇಶನದ ಕಲಾಪಗಳಲ್ಲಿ ಎಲ್ಲ ಸಚಿವರೂ ಹಾಜರಿರಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮುಖ್ಯಮಂತ್ರಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ.

ಈ ಸಂಬಂಧ ಎಲ್ಲ ಸಚಿವರಿಗೂ ಅಗತ್ಯ ಸೂಚನೆಗಳನ್ನು ನೀಡಬೇಕು. ತಾವು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಿ
ಗೆ ಸಂಬಂಧಿಸಿದಂತೆ ಸಚಿವರು ಕಲಾಪದಲ್ಲಿ ಹಾಜರಾಗುವ ಸಂಬಂಧ ವಿನಾಯಿತಿ ಕೋರುವುದು ಸಾಮಾನ್ಯವಾಗಿದೆ’ ಎಂದು ಬಸವರಾಜ ಬೊಮ್ಮಾಯಿ ಮತ್ತು ಜೆ.ಸಿ.ಮಾಧುಸ್ವಾಮಿ ಅವರಿಗೆ ತಿಳಿಸಿದ್ದಾರೆ.

‘ಸಾರ್ವಜನಿಕ ಮಹತ್ವದ ವಿಚಾರಗಳ ಬಗ್ಗೆಸದಸ್ಯರು ಕೇಳುವ ಪ್ರಶ್ನೆಗಳಿಗೆ ಸಂಬಂಧಿತ ಸಚಿವರು ಉತ್ತರ ನೀಡಬೇಕಾಗುತ್ತದೆ. ಹೀಗಾಗಿ ಸಚಿವರು ಚರ್ಚೆಯ ವೇಳೆ ಸದನದಲ್ಲಿ ಗೈರಾಗುವುದು ಸರಿಯಲ್ಲ. ಸಚಿವರ ಅನುಪಸ್ಥಿತಿ, ಆಡಳಿತ ಪಕ್ಷದಿಂದ ಉತ್ತರ ಪಡೆಯುವ ಸದಸ್ಯರ ಅವಕಾಶವನ್ನು ವಂಚಿಸುತ್ತದೆ. ಈ ಹಿನ್ನೆಲೆಯಲ್ಲಿ ಸಚಿವರು ಸದನದಲ್ಲಿ ಹಾಜರಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು’ ಎಂದು ಅವರು ಕಾಗೇರಿ ಹೇಳಿದ್ದಾರೆ.

ಇದೇ ಸ್ವರೂಪದ ಪತ್ರವನ್ನು ಎಲ್ಲ ಸಚಿವರಿಗೂ ವ್ಯಕ್ತಿಗತವಾಗಿ ಕಳುಹಿಸಿರುವ ಸಭಾಧ್ಯಕ್ಷರು, ಸದನದ ಕಾರ್ಯ ಕಲಾಪದಲ್ಲಿ ಪಾಲ್ಗೊಳ್ಳುವಂತೆ ಮತ್ತು ತಮ್ಮ ಕ್ಷೇತ್ರಗಳ ಅಧಿಕೃತ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಕಲಾಪದಿಂದ ವಿನಾಯಿತಿ ಕೋರದಂತೆಯೂ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT