ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ: ಸಿಎಂ ಬಸವರಾಜ ಬೊಮ್ಮಾಯಿ

Last Updated 9 ಆಗಸ್ಟ್ 2021, 4:48 IST
ಅಕ್ಷರ ಗಾತ್ರ

ಬೆಂಗಳೂರು: ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.

ನಾನು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದೇನೆ. ಮೈಸೂರು ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ ನಡೆಸುತ್ತೇನೆ. ಕೋವಿಡ್ ಸೋಂಕು ಹೆಚ್ಚಾಗಿರುವ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ತೀರ್ಮಾನ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುತ್ತೇನೆ. ನಂತರ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆಯುತ್ತೇನೆ ಎಂದು ಅವರು ತಿಳಿಸಿದರು.

ಮೈಸೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿನ ಶಿವಳ್ಳಿ ರೆಸ್ಟೋರೆಂಟ್ ನಲ್ಲಿ ಇಂದು ಬೆಳಗಿನ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ್ ನಿರಾಣಿ, ಡಾ. ಕೆ. ಸುಧಾಕರ, ಎಸ್ ಟಿ ಸೋಮಶೇಖರ, ಬೈರತಿ ಬಸವರಾಜ, ಡಾ. ನಾರಾಯಣಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Caption

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT