ಭಾನುವಾರ, ಆಗಸ್ಟ್ 9, 2020
23 °C

ವಿಐಟಿ ಪ್ರವೇಶ ಪರೀಕ್ಷೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿನ ಕಾರಣಕ್ಕೆ ವಿಲ್ಲೋರ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು (ವಿಐಟಿ) ವಿವಿಧ ಎಂಜಿನಿಯರಿಂಗ್ ಕೋರ್ಸ್‍ಗಳ ಪ್ರವೇಶ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.

ಚೆನ್ನೈ, ಆಂಧ್ರಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿರುವ ವಿಐಟಿ ಸಮೂಹ ಸಂಸ್ಥೆಗಳಲ್ಲಿನ ವಿವಿಧ ಕೋರ್ಸ್‍ಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. 

ದ್ವಿತೀಯ ಪಿಯು ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಈ ಬಾರಿ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಜೆಇಇ ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನೂ ಪರಿಗಣಿಸಲಾಗುವುದು.

ಅರ್ಜಿಗಳನ್ನು ವಿಐಟಿ ವೆಬ್‍ಸೈಟ್ www.vit.ac.in ನಲ್ಲಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಇ-ಮೇಲ್: ugadmission@vit.ac.in ಅಥವಾ ದೂರವಾಣಿ ಸಂಖ್ಯೆ:1800-102-0536ಕ್ಕೆ ಸಂಪರ್ಕಿಸಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು