ಶನಿವಾರ, ನವೆಂಬರ್ 28, 2020
25 °C

ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ; ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮನೆಯ ಮಹಡಿ ಮೇಲೆ ನಿಂತು ಪ್ಯಾಂಟ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿ ಯುವತಿಯೊಬ್ಬರಿಗೆ ಸನ್ನೆ ಮಾಡಿದ್ದ ಆರೋಪಡಿ ರಾಣಾ ಎಂಬಾತನನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.

‘ಕೊಲ್ಕತ್ತಾದ ರಾಣಾ, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ. ಕೋರಮಂಗಲ ಬಳಿ ನೆಲೆಸಿದ್ದ.‌ ಲಾಕ್‌ಡೌನ್ ಇದ್ದಿದ್ದರಿಂದ ಕೆಲಸ ಹೋಗಿತ್ತು. ಹೀಗಾಗಿ, ಮನೆಯಲ್ಲೇ ಇದ್ದ’ ಎಂದು ಪೊಲೀಸರು ಹೇಳಿದರು.

‘ನ.  8ರಂದು ತನ್ನ ಮನೆಯ ಮಹಡಿ ಮೇಲೆ ನಿಂತಿದ್ದ ಆತ, ಸಮೀಪದ ಇನ್ನೊಂದು ಕಟ್ಟಡದಲ್ಲಿದ್ದ ಯುವತಿಗೆ ಸನ್ನೆ ಮಾಡಿದ್ದ. ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ. ಇದರ ವಿಡಿಯೊ ಹಾಗೂ ಫೋಟೊವನ್ನು ಸ್ಥಳೀಯರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.’

‘ಸಂತ್ರಸ್ತ ಯುವತಿಯೂ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದರು. ಸ್ಥಳಕ್ಕೆ ಹೋದ ಸಿಬ್ಬಂದಿ, ಆರೋಪಿಯನ್ನು ಬಂಧಿಸಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು