ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿಚಕ್ರ ವಾಹನ ಕದ್ದು ಓಎಲ್‌ಎಕ್ಸ್‌ನಲ್ಲಿ ಮಾರಾಟ: ಆರೋಪಿ ಬಂಧನ

ವಾಹನಗಳ ನೋಂದಣಿ ಸಂಖ್ಯೆ ಫಲಕ ಬದಲು
Last Updated 14 ಅಕ್ಟೋಬರ್ 2022, 4:21 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದು, ನೋಂದಣಿ ಸಂಖ್ಯೆ ಫಲಕ ಬದಲಾಯಿಸಿ ಮಾರುತ್ತಿದ್ದ ಆರೋಪಿ ಆರ್. ಅಶ್ಫಾಕ್ (26) ಎಂಬುವರನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ತಮಿಳುನಾಡಿನ ಅಶ್ಫಾಕ್, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದು ನೆಲೆಸಿದ್ದ. ದುಶ್ಚಟ ಹಾಗೂ ಐಷಾರಾಮಿ ಜೀವನಕ್ಕೆ ಹಣ ಹೊಂದಿಸುವುದಕ್ಕಾಗಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಇಳಿದಿದ್ದ’ ಎಂದು ಪೊಲೀಸರು ಹೇಳಿದರು.

‘ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಇತ್ತೀಚೆಗೆ ಕಳ್ಳತನವಾಗಿತ್ತು. ತನಿಖೆ ವೇಳೆ, ಅಶ್ಫಾಕ್ ಸಿಕ್ಕಿಬಿದ್ದ. ಈತನಿಂದ ₹ 4.80 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.

‘ಹ್ಯಾಂಡಲ್ ಲಾಕ್ ಮುರಿದು ವಾಹನ ಕಳ್ಳತನ ಮಾಡುತ್ತಿದ್ದ. ಇದರ ನೋಂದಣಿ ಸಂಖ್ಯೆ ಫಲಕ ಬದಲಿಸುತ್ತಿದ್ದ.’

‘ನಕಲಿ ನೋಂದಣಿ ಫಲಕ ಸಂಖ್ಯೆ ಸಮೇತ ದ್ವಿಚಕ್ರ ವಾಹನದ ಫೋಟೊ ತೆಗೆದು, ಓಎಲ್‌ಎಕ್ಸ್‌ ಜಾಲತಾಣದಲ್ಲಿ ಅಪ್‌ಲೋಡ್ ಮಾಡುತ್ತಿದ್ದ. ತನ್ನದೇ ವಾಹನವೆಂದು ಹೇಳಿಕೊಂಡು, ವಾಹನ ಮಾರುತ್ತಿದ್ದ. ಇದರಿಂದ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ. ಹಣ ಖಾಲಿಯಾಗುತ್ತಿದ್ದಂತೆ, ಮತ್ತೆ ವಾಹನ ಕಳ್ಳತನ ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT