ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವೇಳೆ ಒಕ್ಕಲಿಗ ಸಮುದಾಯದವರು ‘ಒಕ್ಕಲಿಗ’ ಎಂದೇ ಬರೆಸಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ. ಕೆಂಚಪ್ಪಗೌಡ ಮನವಿ ಮಾಡಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೆ.22ರಿಂದ ಸಮೀಕ್ಷೆ ಆರಂಭವಾಗಲಿದೆ. ಸಮೀಕ್ಷೆದಾರರು ಮನೆಗೆ ಬಂದಾಗ ವಿವರಗಳನ್ನು ನಿಖರವಾಗಿ ನೀಡಬೇಕು. ಉಪಜಾತಿ ಕಲಂನಲ್ಲಿ ತಮ್ಮ ಉಪಜಾತಿಗಳನ್ನು ನಮೂದಿಸಬೇಕು. ಶಿಕ್ಷಣ, ಉದ್ಯೋಗ, ಆಸ್ತಿ, ಆರ್ಥಿಕ ಮಾಹಿತಿಗಳನ್ನು ಸರಿಯಾಗಿ ಒದಗಿಸಬೇಕು’ ಎಂದು ಹೇಳಿದರು.

ಸಮುದಾಯದ ಸ್ವಾಮೀಜಿ, ಮುಖಂಡರು ಸೇರಿ ಆ.21ರಂದು ಸಭೆ ನಡೆಸಲಾಗುವುದು. ಸಮೀಕ್ಷೆ ನಡೆಯುವುದಕ್ಕಿಂತ ಮೊದಲು ಎಲ್ಲ ಜಿಲ್ಲೆ, ತಾಲ್ಲೂಕುಗಳಲ್ಲಿ ಸಮುದಾಯದವರಿಗೆ ತಿಳಿವಳಿಕೆ ನೀಡಲಾಗುವುದು ಎಂದರು.

ಸಮೀಕ್ಷೆಗೆ ಆಧಾರ್ ಲಿಂಕ್ ಮಾಡಬೇಕು. ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ವಿವರ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಡಿ. ಹನುಮಂತಯ್ಯ, ಯಲುವಳ್ಳಿ ಎನ್. ರಮೇಶ್, ಉಪಾಧ್ಯಕ್ಷ ಎಲ್ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಟಿ. ಕೋನಪ್ಪರೆಡ್ಡಿ, ಸಹ ಕಾರ್ಯದರ್ಶಿ ಆರ್. ಹನುಮಂತರಾಯಪ್ಪ, ಖಜಾಂಚಿ ಎನ್. ಬಾಲಕೃಷ್ಣ, ನಿರ್ದೇಶಕರಾದ ಎಚ್.ಎನ್. ಅಶೋಕ, ಟಿ.ಎಚ್. ಆಂಜಿನಪ್ಪ, ಬಿ.ಪಿ. ಮಂಜೇಗೌಡ, ಅಶೋಕ್, ಎಸ್.ಡಿ. ಜಯರಾಮ್, ಜೆ. ರಾಜು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.