ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಈ ಬಾರಿ ಡೆಂಗಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲು 700 ಸ್ವಯಂ ಸೇವಕರು ಹಾಗೂ 240 ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನು ನೇಮಿಸಲಾಗಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು

ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಜಂಟಿಯಾಗಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಬೆಂಗಳೂರಿನಲ್ಲಿಯೇ ಶೇ 40ರಿಂದ ಶೇ 50ರಷ್ಟು ಡೆಂಗಿ ಪ್ರಕರಣಗಳು ವರದಿಯಾಗುತ್ತಿವೆ. ಸ್ವಯಂ ಸ್ವಚ್ಚತೆಗೆ ಆದ್ಯತೆ ನೀಡಿ, ಸುರಕ್ಷತಾ ಕ್ರಮಗಳನ್ನು ಕೈಗೊಂಡಾಗ ಮಾತ್ರ ಡೆಂಗಿ ನಿಯಂತ್ರಣ ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

‘ನಮ್ಮ ಆರೋಗ್ಯಕ್ಕೆ ನಾವು ಮೊದಲ ಪ್ರಾಮುಖ್ಯ ನೀಡಬೇಕಿದೆ. ಉತ್ತಮ ಆರೋಗ್ಯಕ್ಕೆ ಉತ್ತಮ ವಾತಾವರಣ ನಿರ್ಮಾಣ ಅಗತ್ಯವಿದ್ದು, ನಮ್ಮ ಸುತ್ತಮುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳು ಲಾರ್ವಾ ಉತ್ಪತ್ತಿ ಮಾಡುವ ಪ್ರದೇಶಗಳನ್ನು ಸ್ವಚ್ಚಗೊಳಿಸಬೇಕು’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿಕ್ಕಪೇಟೆ ಶಾಸಕ ಉದಯ್ ಬಿ. ಗರುಡಚಾರ್, ‘ಡೆಂಗಿ ತಡೆಗೆ ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬರೂ ಸ್ವಚ್ಚತೆಗೆ ಆದ್ಯತೆ ನೀಡಬೇಕು’ ಎಂದರು.

ಇದಕ್ಕೂ ಮೊದಲು, ಕಾರ್ಯಕ್ರಮದಲ್ಲಿ ಹಾಜರಿದ್ದ ಸ್ವಯಂ ಸೇವಕರು, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳಿಗೆ ಡೆಂಗಿ ಕುರಿತಾದ ಕರಪತ್ರಗಳನ್ನು ವಿತರಿಸಲಾಯಿತು.

ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಕೆ.ಬಿ., ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ನವೀನ್ ಭಟ್, ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ ವಿಭಾಗ) ವಿಕಾಸ್ ಸುರಳ್ಕರ್ ಕಿಶೋರ್, ಆರೋಗ್ಯ ಇಲಾಖೆ ನಿರ್ದೇಶಕಿ ಡಾ. ತ್ರಿವೇಣಿ, ಸಹ ನಿರ್ದೇಶಕಿ ಡಾ. ರಜಿನಿ ಎಂ. ಉಪಸ್ಥಿತರಿದ್ದರು.

ಸುರಕ್ಷತಾ ಕ್ರಮದ ಬಗ್ಗೆ ಜಾಗೃತಿ

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕುಂಬಾರಗುಂಡಿ ಬಡಾವಣೆಯಲ್ಲಿ ಡೆಂಗಿ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಅರಿವು ಮೂಡಿಸಿದರು. ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಜೊತೆಗಿದ್ದರು. ಮನೆ ಮನೆಗೆ ತೆರಳಿದ ಅವರು ಡೆಂಗಿ ವಿರುದ್ಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ತಿಳಿಸಿದರು. ‘ಈಡೀಸ್ ಸೊಳ್ಳೆಗಳ ಲಾರ್ವಾ ಉತ್ಪತ್ತಿ ತಾಣಗಳಾದ ನೀರಿನ ಟ್ಯಾಂಕ್ ತೆಂಗಿನ ಚಿಪ್ಪು ಸೇರಿ ವಿವಿಧೆಡೆ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಆಗ ಡೆಂಗಿ ನಿಯಂತ್ರಣ ಸಾಧ್ಯವಾಗುತ್ತದೆ’ ಎಂದು ದಿನೇಶ್ ಗುಂಡೂರಾವ್ ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.