ಬೆಂಗಳೂರು: ಮತದಾರರ ಪಟ್ಟಿ ಮ್ಯಾಪಿಂಗ್ ಮಾಡುವ ಕೆಲಸಕ್ಕೆ ಪ್ರೌಢಶಾಲಾ ಶಿಕ್ಷಕರ ಬದಲಿಗೆ ಅಧಿಕಾರಿಗಳನ್ನೇ ನಿಯೋಜಿಸಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು, ಸಂಬಂಧಪಟ್ಟ ಶಾಲೆ ಮಾನ್ಯತೆ ನವೀಕರಣ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಅದೇ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಲು ಕ್ರಮ ವಹಿಸಬೇಕು ಹಾಗೂ ಮಕ್ಕಳ ಪರೀಕ್ಷೆಗಳು ಸಮೀಪಿಸುತ್ತಿರುವ ಕಾರಣ 2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಕಾರ್ಯಗಳಿಂದ ಪ್ರೌಢಶಾಲಾ ಶಿಕ್ಷಕರನ್ನು ಕೈಬಿಟ್ಟು, ಬೇರೆ ಇಲಾಖೆಯ ಅಧಿಕಾರಿಗಳಿಂದ ಈ ಕಾರ್ಯವನ್ನು ಮಾಡಿಸಬೇಕೆಂದು ಕೋರಿ ಮನವಿ ಪತ್ರ ನೀಡಿದರು.

‘ತಮ್ಮ ಮನವಿಗೆ ಹಿರಿಯ ಅಧಿಕಾರಿಗಳಿಬ್ಬರು ಸಕಾರಾತ್ಮಕವಾಗಿ ಸ್ಪಂದಿಸಿ, ಕೂಡಲೇ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮತ್ತು ಸಂಬಂಧಪಟ್ಟವರಿಗೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.