ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರ ಪಟ್ಟಿ ಪರಿಷ್ಕರಣೆಗೆ 18ರವರೆಗೆ ಅವಕಾಶ

Last Updated 15 ಡಿಸೆಂಬರ್ 2020, 20:48 IST
ಅಕ್ಷರ ಗಾತ್ರ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಡಿ.18ರವರೆಗೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬಹುದು.

‘ಮತದಾರರ ಸೇರ್ಪಡೆ, ತೆಗೆದು ಹಾಕುವಿಕೆ, ಪರಿಶೀಲನೆ ಮತ್ತು ದೃಢೀಕರಣ, ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಮಾಡಲು ಅವಕಾಶ ಇದೆ.ಕ್ಷೇತ್ರದ 118, 119, 142, 143, 144, 145, 153 ವಾರ್ಡ್‌ಗಳ ಮತದಾರರು ಪ್ರಯೋಜನ ಪಡೆದುಕೊಳ್ಳಬಹುದು’ಎಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮತದಾರ ಪಟ್ಟಿ ಪರಿಷ್ಕರಣಾ ಅಧಿಕಾರಿ ಎಸ್.ಈಶ್ವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಪಾಸ್‍ಪೋರ್ಟ್, ಡ್ರೈವಿಂಗ್ ಲೈಸನ್ಸ್, ಆಧಾರ್, ಪಡಿತರ ಚೀಟಿ, ಸರ್ಕಾರಿ ಅಥವಾ ಅರೆ ಸರ್ಕಾರಿ ನೌಕರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‍ಬುಕ್, ರೈತರ ಗುರುತಿನ ಚೀಟಿ, ಚುನಾವಣಾ ಆಯೋಗ ಅನುಮೋದಿಸಿರುವ ಯಾವುದೇ ಇತರ ದಾಖಲೆಗಳನ್ನು ಮತದಾರರ ಗುರುತಿನ ಚೀಟಿಗೆ ಅಧಿಕೃತ ದಾಖಲೆಯಾಗಿ ಒದಗಿಸಬಹುದು’.

‘ಸಾಮಾನ್ಯ ಸೇವಾ ಕೇಂದ್ರ, ಮತದಾರರ ನೋಂದಣಿ ಅಧಿಕಾರಿಗಳ ಕಚೇರಿಯ ಮತದಾರರ ಪೂರಕ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್‍ ಜನಸ್ನೇಹಿ ಕೇಂದ್ರ, ಬಾಪೂಜಿ ಸೇವಾ ಕೇಂದ್ರ, ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಬಹುದು. ಮತದಾರರ ಸಹಾಯವಾಣಿ 1950 ಮೂಲಕವೂ ಪರಿಶೀಲಿಸಿ, ದೃಢೀಕರಿಸಿಕೊಳ್ಳಬಹುದು’ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT