ಶುಕ್ರವಾರ, ಜನವರಿ 27, 2023
19 °C

ಮತದಾರರ ಪಟ್ಟಿ: ಮನೆ ಸಮೀಕ್ಷೆ ಶೇ 23ರಷ್ಟು ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗಾಗಿ ನಡೆಯುತ್ತಿರುವ ಮನೆ ಮನೆ ಸಮೀಕ್ಷೆ ಶೇ 23ರಷ್ಟು ಪೂರ್ಣಗೊಂಡಿದೆ ಎಂದು ಬಿಬಿಎಂಪಿ ಚುನಾವಣೆ ವಿಭಾಗದ ಸಹಾಯಕ ಆಯುಕ್ತ ತಿಳಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- 2023ರ ಕಾರ್ಯಚಟುವಟಿಕೆಗಳ ಅಂಗವಾಗಿ ನ.9ರಿಂದ ಡಿ.8ರವರೆಗೆ ಬಿಎಲ್‌ಒಗಳು ಮನೆ ಮನೆ ಸಮೀಕ್ಷೆ ಕಾರ್ಯ ನಡೆಸಬೇಕಾಗಿದೆ. ಈವರೆಗೆ 28 ವಿಧಾನಸಭೆ ಕ್ಷೇತ್ರಗಳಲ್ಲಿ ಸಮೀಕ್ಷೆ ಕಾರ್ಯ ಶೇ 23ರಷ್ಟು ಪ್ರಗತಿ ಸಾಧಿಸಿದೆ.

ಆಯೋಗ ನೀಡಿರುವ ಅವಧಿಯೊಳಗೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲು ಎಲ್ಲ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು