ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಆರ್‌.ಪುರ: 3 ಗಂಟೆ ಬಳಿಕ ಮತದಾನ ಬಿರುಸುಗೊಳ್ಳುವ ಸಾಧ್ಯತೆ

Last Updated 5 ಡಿಸೆಂಬರ್ 2019, 9:27 IST
ಅಕ್ಷರ ಗಾತ್ರ

ಬೆಂಗಳೂರು: ಉಪಚುನಾವಣೆ ನಡೆಯುತ್ತಿರುವ ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರದಲ್ಲಿ ಇದುವರೆಗೆ ಮಂದಗತಿಯಲ್ಲೇ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆಯ ಬಳಿಕ ಚುರುಕುಗೊಳ್ಳುವ ನಿರೀಕ್ಷೆ ಇದೆ.

ಕೆಲವು ಖಾಸಗಿ ಕಂಪನಿಗಳು, ಕೈಗಾರಿಕೆಗಳು 3 ಗಂಟೆಯವರೆಗೆ ಕೆಲಸಕ್ಕೆ ಬರಬೇಕು ಎಂದು ಸಿಬ್ಬಂದಿಗೆ ತಿಳಿಸಿವೆ. ಹೀಗಾಗಿ 3 ಗಂಟೆಯ ಬಳಿಕ ಮತದಾನ ಪ್ರಮಾಣ ಹೆಚ್ಚಬಹುದು ಎಂದು ಹಲವು ಮತಗಟ್ಟೆಗಳಲ್ಲಿ ಸಿಬ್ಬಂದಿ ಹೇಳಿದರು.

ಮಧ್ಯಾಹ್ನ 2 ಗಂಟೆಯವರೆಗೆ ಕ್ಷೇತ್ರದಲ್ಲಿ ಶೇ 30ರಷ್ಟು ಮತದಾನ ಮಾತ್ರ ಆಗಿದೆ. ಇದು ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಕಂಗಾಲುಗೊಳಿಸಿದೆ.

ಶಿವಾಜಿನಗರ: ಶಿವಾಜಿನಗರ ಕ್ಷೇತ್ರದಲ್ಲಿ ಬಿಸಿಲೇರುತ್ತಿದ್ದಂತೆಯೇ ಮತದಾನವೂ ಚುರುಕುಗೊಂಡಿದೆ. ಮಧ್ಯಾಹ್ನ 2 ಗಂಟೆಯವರೆಗೆ ಇಲ್ಲೂ ಶೇ 30ರಷ್ಟು ಮತದಾನ ಮಾತ್ರ ಆಗಿದೆ. ಆದರೆ ಇಲ್ಲಿ ಸಂಜೆ ಹೊತ್ತು ಮತದಾನ ಬಿರುಸುಗೊಳ್ಳುವ ಸಾಧ್ಯತೆಗಳು ಕಾಣಿಸುತ್ತಿಲ್ಲ. ಹೀಗಾಗಿ ಒಟ್ಟಾರೆ ಮತದಾನ ಪ್ರಮಾಣ ಶೇ 50ರ ಗಡಿ ದಾಟಬಹುದೇ ಎಂಬ ಸಂಶಯ ಮನೆಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT