ಗುರುವಾರ , ಆಗಸ್ಟ್ 13, 2020
21 °C

ಕೆಪಿಎಸ್‌ಸಿ ಸದಸ್ಯರಾಗಿ ನಿವೃತ್ತ ಐಎಎಸ್‌ ಅಧಿಕಾರಿ ವಿ.ಪಿ.ಇಕ್ಕೇರಿ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿವೃತ್ತ ಐಎಎಸ್‌ ಅಧಿಕಾರಿ ವಿ.ಪಿ. ಇಕ್ಕೇರಿ ಅವರನ್ನು ಕರ್ನಾಟಕ ಲೋಕ ಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರನ್ನಾಗಿ ರಾಜ್ಯ ಸರ್ಕಾರ ಸೋಮವಾರ ನೇಮಿಸಿದೆ.

ಕೆಪಿಎಸ್‌ಸಿಯಲ್ಲಿ ಅಧ್ಯಕ್ಷರು ಸೇರಿ ಒಟ್ಟು 14 ಸದಸ್ಯರಿದ್ದರು. ಈ ಪೈಕಿ, ಸದಸ್ಯರಾಗಿದ್ದ ಲಕ್ಷ್ಮೀ ನರಸಯ್ಯ ಅವರು ಸೋಮವಾರ ನಿವೃತ್ತಿಯಾದರು. ಒಂದು ಸದಸ್ಯ ಸ್ಥಾನ ಖಾಲಿಯಾದ ಹಿನ್ನೆಲೆಯಲ್ಲಿ ಇಕ್ಕೇರಿ ಅವರನ್ನು ನೇಮಿಸಲಾಗಿದೆ.

ಇಕ್ಕೇರಿ ಅವರನ್ನು ಅಧಿಕಾರಿ ಸದಸ್ಯರು ಆಗಿ ನೇಮಿಸಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು