ಗುರುವಾರ , ಜೂನ್ 24, 2021
25 °C

ವಿಟಿಯು ಪರೀಕ್ಷೆ: ಆನ್‌ಲೈನ್ ಆಯ್ಕೆ ಪರಿಗಣಿಸಲು ಹೈಕೋರ್ಟ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಫ್‌ಲೈನ್ ಪರೀಕ್ಷೆಯ ಜತೆಗೆ ಆನ್‌ಲೈನ್ ಪರೀಕ್ಷೆಯನ್ನು ಒಂದು ಆಯ್ಕೆಯಾಗಿ ಪರಿಗಣಿಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ(ವಿಟಿಯು) ಹೈಕೋರ್ಟ್ ಗುರುವಾರ ಸೂಚಿಸಿದೆ.

‘ಸೆಪ್ಟೆಂಬರ್ 15ರಿಂದ ಪರೀಕ್ಷೆ ಆರಂಭವಾಗಲಿದ್ದು, ನಿರ್ಧಾರ ತೆಗೆದುಕೊಳ್ಳಲು ವಿಶ್ವವಿದ್ಯಾಲಯಕ್ಕೆ ಇನ್ನೂ ಸಾಕಷ್ಟು ಸಮಯ ಇದೆ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸೆಪ್ಟೆಂಬರ್ ಅಂತ್ಯದೊಳಗೆ ‍ಪರೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಯುಜಿಸಿ ನೀಡಿರುವ ನಿರ್ದೇಶನ ಪ್ರಶ್ನಿಸಿ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

‘ಆನ್‌ಲೈನ್ ಪರೀಕ್ಷೆ ನಡೆಸಲು ತಜ್ಞರ ನೆರವು ಪಡೆಯಬೇಕು. ಈ ಸಂಬಂಧ ತನ್ನ ನಿರ್ಧಾರವನ್ನು ಕೂಡಲೇ ತಿಳಿಸಬೇಕು ಎಂದು ವಿಶ್ವ ವಿದ್ಯಾಲಯಕ್ಕೆ ನ್ಯಾಯಪೀಠ ತಿಳಿಸಿತು. ಕುಂದು ಕೊರತೆಗಳ ಪರಿಹಾರಕ್ಕೆ ಗೊತ್ತುಪಡಿಸಿದ ಅಧಿಕಾರಿಗಳ ಸಂಪರ್ಕ ವಿವರಗಳನ್ನು  ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆಯೂ ವಿಟಿಯುಗೆ ನಿರ್ದೇಶನ ನೀಡಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು