ಮಂಗಳವಾರ, ಆಗಸ್ಟ್ 3, 2021
22 °C

ಬೂತ್‌ ಮಟ್ಟದ ಸಮಿತಿಗೆ ಮಾರ್ಗಸೂಚಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವಾರ್ಡ್‌ ಮತ್ತು ಬೂತ್ ಮಟ್ಟದಲ್ಲಿ ಕೋವಿಡ್‌ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚನೆ ಮಾಡಲು ಬಿಬಿಎಂಪಿಗೆ ನಿರ್ದೇಶನ ನೀಡಿರುವ ನಗರಾಭಿವೃದ್ಧಿ ಇಲಾಖೆ, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

‘ಈಗಾಗಲೇ ಇರುವ ವಾರ್ಡ್‌ ಸಮಿತಿಗಳನ್ನು ಕೋವಿಡ್ ನಿರ್ವಹಣೆಗೆ ಬಳಸಿಕೊಳ್ಳಬೇಕು. ಬೂತ್ ಮಟ್ಟದಲ್ಲೂ ಸಮಿತಿಗಳನ್ನು ರಚಿಸಿ ನಿರ್ವಹಣೆ ಜವಾಬ್ದಾರಿ ನೀಡುವುದು ಸೂಕ್ತ’ ಎಂದು ತಿಳಿಸಿದೆ.

‘ಸಮಿತಿ ಸದಸ್ಯರು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದರ ಕುರಿತು ತರಬೇತಿ ನೀಡಬೇಕು. ಆಗ ಬೂತ್ ಮಟ್ಟದಲ್ಲೇ ಕೋವಿಡ್ ನಿಯಂತ್ರಿಸಬಹುದು’ ಎಂದು ಅಭಿಪ್ರಾಯಪಟ್ಟಿದೆ.

‘ಸ್ಥಳೀಯ ಜನಪ್ರತಿನಿಧಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು, ಬಿಬಿಎಂಪಿ ಅಧಿಕಾರಿ, ಪೊಲೀಸ್ ಸಿಬ್ಬಂದಿ ಮತ್ತು ಸ್ವಯಂ ಸೇವಕರು ಸಮಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದೆ.

‘ಈ ಸಮಿತಿಯು ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಸುಳ್ಳು ಸುದ್ದಿ ಮತ್ತು ತಪ್ಪು ಕಲ್ಪನೆಗಳಿಂದ ಜನ ಆತಂಕಕ್ಕೆ ಈಡಾಗದಂತೆ ನೋಡಿಕೊಳ್ಳಬೇಕು. ಸಮಿತಿ ವಾರಕ್ಕೊಮ್ಮೆ ಸಭೆ ನಡೆಸಿ ತಮ್ಮ ವ್ಯಾಪ್ತಿಯ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಬೇಕು’ ಎಂದು ಮಾರ್ಗಸೂಚಿಯಲ್ಲಿ ವಿವರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು