ಮಂಗಳವಾರ, ಜನವರಿ 26, 2021
22 °C

ಕಸ ಸಂಗ್ರಹಕ್ಕೆ 600 ವಾಹನ: ಬಿಬಿಎಂಪಿ ಆಯುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಒಣ ಕಸವನ್ನು ಮನೆ ಮನೆಯಿಂದ ಸಂಗ್ರಹಿಸಲು ಹೊಸದಾಗಿ 600 ವಾಹನಗಳನ್ನು ಒದಗಿಸಲು ಟೆಂಡರ್ ಕರೆಯಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ತಿಳಿಸಿದರು.

ಹಸಿರು ದಳ, ಬಿಬಿಸಿ ಮೀಡಿಯಾ ಆ್ಯಕ್ಷನ್, ಕೇರ್, ಲೇಬರ್ ನೆಟ್, ಸೇವ್ ದಿ ಚಿಲ್ಡ್ರನ್, ಸೋಷಿಯಲ್ ಆಲ್ಫಾ ಹಾಗೂ ವಿವಿಧ ನಾಗರಿಕ ಸಂಘಟನೆಗಳು ‘ಸಾಮೂಹಿಕ ಶಕ್ತಿ’ ಹೆಸರಿನಲ್ಲಿ ಆಯೋಜಿಸಿದ್ದ ಕಸ ಆಯುವವರ ಸವಾಲುಗಳು ಮತ್ತು ಪರಿಸರ ಸಂರಕ್ಷಣೆಯಲ್ಲಿ ಅವರ ಪಾತ್ರದ ಕುರಿತ ವೆಬಿನಾರ್‌ನಲ್ಲಿ ಮಾತನಾಡಿದರು.

‘ಕಸ ಸಂಗ್ರಹ ಮಾಡುವವರ ಮೇಲೆ ಪೊಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿಯಿಂದ ದೌರ್ಜನ್ಯ ನಡೆಯುತ್ತಿದೆ ಎಂಬ ಆರೋಪ ಇದೆ. ಅವರ ಗೌರವಯುತ ಜೀವನಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ 8 ಸಾವಿರ ಜನರಿಗೆ ಗುರುತಿನ ಚೀಟಿಗಳನ್ನು ನೀಡಲಾಗಿದೆ. ವಾಹನಗಳನ್ನು ಒದಗಿಸಲಾಗಿದೆ’ ಎಂದರು.

‘ಇವುಗಳ ಹೊರತಾಗಿಯೂ ಅವರ ಆರೋಗ್ಯ ಮತ್ತು ಜೀವನಮಟ್ಟ ಸುಧಾರಣೆಗೆ ಒತ್ತು ನೀಡಬೇಕಾಗಿದೆ. ಅವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮತ್ತು ಸರ್ಕಾರದ ಸವಲತ್ತುಗಳನ್ನು ಬಳಸಿಕೊಳ್ಳಲು ಅವರನ್ನು ಜಾಗೃತಗೊಳಿಸಬೇಕಾಗಿದೆ. ಈ ಕೆಲಸಕ್ಕೆ ನಾಗರಿಕ ಸಂಸ್ಥೆಗಳ ಸಹಕಾರ ಅತೀ ಮುಖ್ಯ’ ಎಂದು ಹೇಳಿದರು.

ನಂತರ ನಡೆದ ಸಂವಾದದಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ(ಕಸ ನಿರ್ವಹಣೆ) ಡಿ. ರಂದೀಪ್, ಹಸಿರು ದಳ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ನಳಿನಿ ಶೇಖರ್, ಭಾರತಿ ದೇವನ್ ಪಾಲ್ಗೊಂಡು ಘನತ್ಯಾಜ್ಯ ನಿರ್ವಹಣೆಯಲ್ಲಿ ಚಿಂದಿ ಆಯುವವರ ಪಾತ್ರದ ಕುರಿತು ಚರ್ಚಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು