ಭಾನುವಾರ, ಸೆಪ್ಟೆಂಬರ್ 27, 2020
24 °C

‘ಜಲಶಕ್ತಿಗಾಗಿ ಜನಶಕ್ತಿ’ ಸೈಕಲ್‌ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನೀರಿನ ಸಂರಕ್ಷಣೆ’ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶೇಷಾದ್ರಿಪುರ ಕಾಲೇಜು ಹಾಗೂ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಆಶ್ರಯದಲ್ಲಿ ‘ಬೆಂಗಳೂರಿನಿಂದ ಮೈಸೂರಿನವರೆಗೆ ಸೈಕಲ್‌ ಜಾಥಾ’ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್‌ ಸೋಮವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿ, ‘ನೀರಿನ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಬೆಂಗಳೂರು ನಗರವನ್ನು ಆಯ್ಕೆ ಮಾಡಲಾಗಿದೆ. ನೀರಿನ ಅನಿವಾರ್ಯತೆ ಹಾಗೂ ಹನಿ ನೀರು ಶೇಖರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ನಮ್ಮ ಉದ್ದೇಶ’ ಎಂದರು.

ಕರ್ನಾಟಕ ಗಾಂಧಿ ಸ್ಮಾರಕ ಅಧ್ಯಕ್ಷ ವೂಡೇ ಪಿ.ಕೃಷ್ಣ, ‘ಜಲ ಸಂಪನ್ಮೂಲವನ್ನು ಮುಂದಿನ ಪೀಳಿಗೆಗೆ ಉಳಿಸಬೇಕು. ಈ ನಿಟ್ಟಿನಲ್ಲಿ ಸೈಕಲ್ ಜಾಥಾ ಸಾಮಾಜಿಕ ಸಂದೇಶವನ್ನು ಹೊತ್ತು ಜನರಲ್ಲಿ ನೀರಿನ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲಿದೆ’ ಎಂದರು. 

ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ರಾಜ್ಯ ಸಂಪರ್ಕಾಧಿಕಾರಿ ಗಣನಾಥ ಶೆಟ್ಟಿ ಎಕ್ಕಾರು, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜನಾಕಾರಿ ಗೋವಿಂದೇಗೌಡ, ಆಡಳಿತ ಸಲಹಾ ಮಂಡಳಿ ಅಧ್ಯಕ್ಷ ಎಂ.ಎಸ್.ನಟರಾಜ್, ಪ್ರಾಂಶುಪಾಲ ಅನುರಾಧ ರಾಯ್ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು