ಮಂಗಳವಾರ, ಸೆಪ್ಟೆಂಬರ್ 28, 2021
24 °C

ಜಲ ಸಂರಕ್ಷಣೆ ಮುಂದಿನ ಪೀಳಿಗೆಗೆ ಬಳುವಳಿ: ಶಾಸಕ ಅರವಿಂದ ಲಿಂಬಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ‘ನಗರಗಳಲ್ಲಿ ನೀರಿನ ಬವಣೆ ಹೆಚ್ಚುತ್ತಿರುವುದರಿಂದ ಜಲಮೂಲಗಳನ್ನು ಸಂರಕ್ಷಿಸುವ ಜೊತೆಗೆ ಮುಂದಿನ ಪೀಳಿಗೆಗೆ ನೀರು ಲಭ್ಯವಾಗುವಂತೆ ಮಾಡಬೇಕಿದೆ’ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

ಇಲ್ಲಿನ ಗರುಡಚಾರ್ ಪಾಳ್ಯದ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಜಲಮೂಲಗಳು ಹಾಗೂ ಪರಿಸರ ಸಂರಕ್ಷಣೆ ಮಾಡುವುದೇ ಮುಂದಿನ ಪೀಳಿಗೆಗೆ ನಾವು ನೀಡುವ ಬಳುವಳಿ. ಇತ್ತೀಚಿನ ದಿನಗಳಲ್ಲಿ ಜಲಮೂಲಗಳು ಕಣ್ಮರೆಯಾಗುತ್ತಿವೆ. ಬಿಜೆಪಿ ಸರ್ಕಾರ ಬಂದ ನಂತರ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ’ ಎಂದರು.

‘ಮಹದೇವಪುರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಸಿಎಸ್‌ಆರ್ ಅನುದಾನ ಸೇರಿದಂತೆ ವಿವಿಧ ಅನುದಾನಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಕ್ಷೇತ್ರದಲ್ಲಿರುವ 40ಕ್ಕೂ ಹೆಚ್ಚು ಕೆರೆಗಳು ಅಭಿವೃದ್ಧಿ ಹಂತದಲ್ಲಿವೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು