ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಲಿಗೆಗೆ ಕಡಿವಾಣ: ನೀರಿನ ಟ್ಯಾಂಕರ್‌ಗೆ ದರ ನಿಗದಿ ಮಾಡಿದ ಬೆಂಗಳೂರು ಜಿಲ್ಲಾಡಳಿತ

ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶ
Published 8 ಮಾರ್ಚ್ 2024, 5:13 IST
Last Updated 8 ಮಾರ್ಚ್ 2024, 5:13 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಟ್ಯಾಂಕರ್‌ ನೀರಿಗೆ ದುಪ್ಪಟ್ಟು ದರ ವಸೂಲಿ ಮಾಡಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರು ಟ್ಯಾಂಕರ್‌ ನೀರಿಗೆ ದರ ನಿಗದಿ‌ ಮಾಡಿದ್ದಾರೆ.

ಬೆಂಗಳೂರು ನಗರ ಜಿಲ್ಲಾಡಳಿತದಿಂದ ನೀರಿನ ಟ್ಯಾಂಕರ್‌ಗಳಿಗೆ ಬೆಲೆಯನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಲ್ಲಿಸಿದ್ದ ಮನವಿ ಪರಿಶೀಲಿಸಿದ ನಂತರ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಜಿಲ್ಲಾಡಳಿತ ನಿಗದಿಪಡಿಸಿರುವ ದರಪಟ್ಟಿ:

  • 5 ಕಿ.ಮೀ ವ್ಯಾಪ್ತಿವರೆಗೆ 6,000 ಲೀಟರ್ ನೀರಿನ ಟ್ಯಾಂಕರ್ ಗೆ ₹600 , 8,000 ಲೀಟರ್ ನೀರಿನ ಟ್ಯಾಂಕರ್ ಗೆ ₹700, 12,000 ಲೀಟರ್ ನೀರಿನ ಟ್ಯಾಂಕರ್ ಗೆ ₹1,000 ನಿಗದಿ ಮಾಡಲಾಗಿದೆ.

  • 5 ರಿಂದ 10 ಕಿಮೀ ವರೆಗೆ ಕಿಮೀ ವ್ಯಾಪ್ತಿವರೆಗೆ 6000 ಲೀಟರ್ ನೀರಿನ ಟ್ಯಾಂಕರ್ ಗೆ ₹750, 8,000 ಲೀಟರ್ ನೀರಿನ ಟ್ಯಾಂಕರ್ ಗೆ ₹ 850, 12,000 ಲೀಟರ್ ನೀರಿನ ಟ್ಯಾಂಕರ್ ಗೆ ₹1,200 ನಿಗದಿ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವ ಜಿಲ್ಲಾಧಿಕಾರಿಗಳು, ನೀರು ಸರಬರಾಜು ಮಾಡುವ ಖಾಸಗಿ ಟ್ಯಾಂಕರ್ ಗಳು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಲಿದ್ದು, ಈ ದರಗಳಲ್ಲಿ ಜಿಎಸ್‌ಟಿ ಸೇರ್ಪಡೆಯಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT