ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ ಸರ್ಕಾರದಿಂದ ಬೆಂಗಳೂರಿನ ಮಾನ ಹರಾಜು: ಆರ್‌. ಅಶೋಕ

Published 9 ಮಾರ್ಚ್ 2024, 21:03 IST
Last Updated 9 ಮಾರ್ಚ್ 2024, 21:03 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜಧಾನಿಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಂಭಕರ್ಣ ನಿದ್ದೆಯಲ್ಲಿರುವ ಕಾಂಗ್ರೆಸ್‌ ನೇತೃತ್ವದ ಸರ್ಕಾರವು ಬೆಂಗಳೂರಿನ ಮಾನವನ್ನು ಹರಾಜು ಹಾಕುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಟೀಕಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ. ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾದರೂ ಎಚ್ಚೆತ್ತುಕೊಂಡಿಲ್ಲ’ ಎಂದರು.

ರಾಜ್ಯದ ಹಿತವನ್ನು ಕಡೆಗಣಿಸಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿದರು. ಈಗ ಬೆಂಗಳೂರಿಗೆ ಕಾವೇರಿ ನೀರು ಪೂರೈಕೆಯಲ್ಲಿ ಶೇಕಡ 30ರಷ್ಟು ಕಡಿತ ಮಾಡಲಾಗಿದೆ. ಕೃಷ್ಣರಾಜ ಸಾಗರ ಅಣೆಕಟ್ಟೆಯಲ್ಲಿ ಅತ್ಯಲ್ಪ ಪ್ರಮಾಣದ ನೀರು ಲಭ್ಯವಿದೆ. ಸಮಸ್ಯೆ ಬಿಗಡಾಯಿಸುತ್ತಿದ್ದು, ಸರ್ಕಾರದಿಂದ ಪರಿಹಾರ ಕ್ರಮವೇ ಕೈಗೊಂಡಿಲ್ಲ ಎಂದು ದೂರಿದರು.

ನಗರದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವವರನ್ನು ನಿಯಂತ್ರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಖಾಸಗಿ ಕೊಳವೆ ಬಾವಿಗಳನ್ನು ವಶಕ್ಕೆ ಪಡೆದು ನೀರು ಪೂರೈಸುವುದಕ್ಕೂ ಕ್ರಮ ಆಗಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT