ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜರಾಜೇಶ್ವರಿನಗರ: ’ಮನೆಮನೆಗೆ ಕೊಳಾಯಿ ನೀರು’ ಯೋಜನೆಗೆ ಚಾಲನೆ

Published 26 ಫೆಬ್ರುವರಿ 2024, 15:43 IST
Last Updated 26 ಫೆಬ್ರುವರಿ 2024, 15:43 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ಚಲ್ಲಘಟ್ಟ, ಭೀಮನಕುಪ್ಪೆಯಲ್ಲಿ ₹2.25ಕೋಟಿ ವೆಚ್ಚದ ‘ಮನೆಮನೆಗೆ ನಲ್ಲಿ ನೀರು ಸಂಪರ್ಕ ಕಲ್ಪಿಸುವ ಯೋಜನೆ’ ಕಾಮಗಾರಿಕೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಮಂಚನಬೆಲೆ ಜಲಾಶಯದಿಂದ ಹಲವು ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿ ಪೂರ್ಣಗೊಂಡರೆ ಕ್ಷೇತ್ರದಲ್ಲಿ ಶೇ 60ರಷ್ಟು ಗ್ರಾಮೀಣ ಭಾಗದಲ್ಲಿನ ನೀರಿನ ಸಮಸ್ಯೆ ಬಗೆ ಹರಿಯಲಿದೆ ಎಂದರು.

ರಾಮೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ವೇಣುಗೋಪಾಲ್ ಮಾತನಾಡಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಎಚ್.ಪ್ರಭು, ಚಂದ್ರು, ಸದಸ್ಯ ಚೇತನ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಚೇತನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT