ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ವಿಮಾನ ನಿಲ್ದಾಣ ಟರ್ಮಿನಲ್‌ಗೆ ನುಗ್ಗಿದ ಮಳೆ ನೀರು

Last Updated 12 ಅಕ್ಟೋಬರ್ 2021, 13:00 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತ ಸೋಮವಾರ ರಾತ್ರಿ ಭಾರಿ ಮಳೆ ಸುರಿದಿದೆ. ಮಳೆಯಿಂದಾಗಿ ಟರ್ಮಿನಲ್‌ಗೆ ನೀರು ನುಗ್ಗಿ ಪ್ರಯಾಣಿಕರು ಮತ್ತು ವಾಹನ ಸವಾರರು ಪರದಾಡಿದರು. ಪ್ರಯಾಣಿಕರು ಹೊರ ಹೋಗಲು ಮತ್ತು ಒಳಬರಲು ಟ್ರ್ಯಾಕ್ಟರ್ ಬಳಸಿದ್ದು ಅದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಳೆಯಿಂದ ವಿಮಾನ ಸೇವೆಯಲ್ಲೂ ವ್ಯತ್ಯಯ ಉಂಟಾಗಿತ್ತು. ಹವಾಮಾನ ವೈಪರೀತ್ಯದಿಂದಾಗಿ 11 ವಿಮಾನಗಳ ಹಾರಾಟ ವಿಳಂಬವಾಯಿತು. ಇನ್ನು ನಿಲ್ದಾಣಕ್ಕೆ ಬರಬೇಕಾಗಿದ್ದ ವಿಮಾನಗಳ ಆಗಮನಕ್ಕೂ ತಡವಾಯಿತು. ಟರ್ಮಿನಲ್ ಮುಂಭಾಗದಲ್ಲಿ ಎರಡು ಅಡಿಗೂ ಅಧಿಕ ನೀರು ನಿಂತಿದ್ದರಿಂದ ವಾಹನಗಳು ಸಂಚರಿಸಲಾಗದೆ ಕೆಲಕಾಲ ನಿಂತಲ್ಲೇ ನಿಂತು ಸಂಚಾರ ದಟ್ಟಣೆ ಉಂಟಾಗಿತ್ತು. ನೀರು ತುಂಬಿದ ರಸ್ತೆಗಳಲ್ಲಿ ಕ್ಯಾಬ್ ಚಾಲಕರು ವಾಹನ ಚಲಾಯಿಸಲು ಹಿಂದೇಟು ಹಾಕಿದರು.

ಕರ್ಬ್ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆಯಾದರೂ ಅಧಿಕ ಮಳೆಯಿಂದ ವ್ಯತ್ಯಯವಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT