ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

200 ಮೀಟರ್ ಅಂತರದಲ್ಲೇ ನೀರಿನ ಘಟಕ: ಸ್ಥಳೀಯರ ಆಕ್ಷೇಪ

Last Updated 17 ಜನವರಿ 2023, 21:36 IST
ಅಕ್ಷರ ಗಾತ್ರ

ಬೆಂಗಳೂರು: ಗಂಗೇನಹಳ್ಳಿ (ವಾರ್ಡ್‌ ನಂ.72) ವ್ಯಾಪ್ತಿಯ ಬಿನ್ನಿಮಿಲ್ ರಸ್ತೆಯಲ್ಲಿ 200 ಮೀಟರ್‌ ವ್ಯಾಪ್ತಿಯಲ್ಲೇ ಮತ್ತೊಂದು ಕುಡಿಯುವ ನೀರಿನ ಘಟಕ ಸ್ಥಾಪಿಸುತ್ತಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ಸಲ್ಲಿಸಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.

‘ಈಗಾಗಲೇ ಒಂದು ಕುಡಿಯುವ ಒಂದು ಕುಡಿಯುವ ನೀರಿನ ಘಟಕ ಬಿನ್ನಿಮಿಲ್‌ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಹೀಗಿರುವಾಗ, ಕೇವಲ 200 ಮೀಟರ್‌ ಅಂತರದಲ್ಲಿ ಮತ್ತೊಂದು ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲು ಮುಂದಾಗಿರುವುದು ರಾಜಕೀಯ ಪ್ರೇರಿತವಾಗಿದೆ’ ಎಂದು ದೂರಿದ್ದಾರೆ.

‘ಹಾಲಿ ಇರುವ ಘಟಕದಿಂದ ಸ್ಥಳೀಯವಾಗಿ ಯಾವುದೇ ತೊಂದರೆ ಇಲ್ಲದೆಯೇ ಸಮರ್ಪಕವಾಗಿ ಕುಡಿಯುವ ನೀರು ಸಾರ್ವಜನಿಕರಿಗೆ ಲಭ್ಯವಾಗುತ್ತಿದೆ. ಹೀಗಿರುವಾಗ ಕಿರಿದಾಗಿರುವ ಮತ್ತು ವಾಹನ ದಟ್ಟಣೆ ಹೆಚ್ಚಾಗಿರುವ ರಸ್ತೆಯಲ್ಲಿ ಪಾದಚಾರಿ ರಸ್ತೆಯನ್ನು ಆಕ್ರಮಿಸಿಕೊಂಡು ಸಾರ್ವಜನಿಕ ತೆರಿಗೆ ಮೊತ್ತವನ್ನು ಪೋಲು ಮಾಡಿ ಹೊಸದಾಗಿ ಮತ್ತೊಂದು ನೀರಿನ ಘಟಕವನ್ನು ಸ್ಥಾಪಿಸಲು ಹೊರಟಿರುವುದು ಯಾವ ಪುರುಷಾರ್ಥಕ್ಕೆ ಎಂಬುದು ತಿಳಿಯುತ್ತಿಲ್ಲ’ ಎಂದು ಬಿ. ವೇದಕುಮಾರ್‌, ಮಾಯಣ್ಣ ಮತ್ತಿತರರು ದೂರಿದ್ದಾರೆ.

‘ಆದ್ದರಿಂದ, ಹೊಸದಾಗಿ ಇದೇ ಸ್ಥಳದಲ್ಲೇ ನೀರಿನ ಘಟಕ ಸ್ಥಾಪಿಸಲು ಅನುಮೋದನೆ ನೀಡಬಾರದು. ಸಾರ್ವಜನಿಕರಿಗೆ ಅನುಕೂಲವಾಗುವಂತಹ ಇಂತಹ ಯೋಜನೆಗಳನ್ನು ಅವಶ್ಯಕತೆ ಇರುವ ಬೇರೆ ಸ್ಥಳದಲ್ಲಿ ಸ್ಥಾಪಿಸಬೇಕು. ಒಂದು ವೇಳೆ, ಇದೇ ಸ್ಥಳದಲ್ಲೇ ಹೊಸದಾಗಿ ನೀರಿನ ಘಟಕಗಳನ್ನು ಸ್ಥಾಪಿಸಲು ಅನುಮತಿ ನೀಡಿದರೆ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ. ಆದ್ದರಿಂದ, ಯಾವುದೇ ಕಾರಣಕ್ಕೂ ಈ ಸ್ಥಳದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಅವಕಾಶ ಮಾಡಿಕೊಡಬಾರದು. ಈ ಬಗ್ಗೆ ಅಧಿಕಾರಿಗಳಿಗೂ ನಿರ್ದೇಶನ ನೀಡಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT