ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎತ್ತಿನಹೊಳೆ ಎರಡನೆ ಹಂತದಲ್ಲಿ ನೆಲಮಂಗಲಕ್ಕೆ ನೀರು: ಶಾಸಕ ಶ್ರೀನಿವಾಸ್‌

Published : 10 ಸೆಪ್ಟೆಂಬರ್ 2024, 15:30 IST
Last Updated : 10 ಸೆಪ್ಟೆಂಬರ್ 2024, 15:30 IST
ಫಾಲೋ ಮಾಡಿ
Comments

ನೆಲಮಂಗಲ: ಎತ್ತಿನಹೊಳೆ ಯೋಜನೆಯ ಮೊದಲನೆ ಹಂತ ಅನುಷ್ಠಾನಗೊಂಡಿದ್ದು, ಎರಡನೇ ಹಂತದಲ್ಲಿ ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲಕ್ಕೂ ನೀರು ಬರಲಿದೆ ಎಂದು ಶಾಸಕ ಎನ್‌.ಶ್ರೀನಿವಾಸ್‌ ತಿಳಿಸಿದರು.

ತಾಲ್ಲೂಕಿನ ಬಾಣವಾಡಿ, ಪಾಲನಹಳ್ಳಿ ಗ್ರಾಮಗಳಲ್ಲಿ ₹1 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಣವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೈಲನಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶೀಘ್ರದಲ್ಲಿ ಸ್ಥಾಪಿಸಲಾಗುವುದು ಎಂದರು. ಕಾಮಗಾರಿಗಳಿಗೆ ಗ್ರಾಮಸ್ಥರಿಂದಲೇ ಗುದ್ದಲಿ ಪೂಜೆ ಮಾಡಿಸಿದರು.

ಪಾಲನಹಳ್ಳಿಯಲ್ಲಿ ಸ್ತ್ರೀಶಕ್ತಿ ಭವನ ನಿರ್ಮಾಣಕ್ಕೆ ₹ 50 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಗ್ರಾಮಗಳ ಪ್ರದಕ್ಷಿಣೆ ಮಾಡಿದ ಶಾಸಕ ಎನ್‌.ಶ್ರೀನಿವಾಸ್‌ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT