ಸೋಮವಾರ, ನವೆಂಬರ್ 18, 2019
25 °C

ಬಿಜೆಪಿ ಕುದುರೆ ವ್ಯಾಪಾರದ ಬಗ್ಗೆ ರಾಷ್ಟ್ರಪತಿಗೆ ದೂರು: ಸಿದ್ದರಾಮಯ್ಯ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪರೇಷನ್ ಕಮಲ ಸಂಬಂಧದ ಆಡಿಯೋ ಕ್ಲಿಪ್ ಬಗ್ಗೆ ರಾಷ್ಟ್ರಪತಿಗಳಿಗೆ ದೂರು ನೀಡಲು ನಿರ್ಧರಿಸಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ತಿಳಿಸಿದರು.

‘ಈ ಆಪರೇಷನ್ ಕಮಲದ ಆಡಿಯೋ ಕ್ಲಿಪ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗು ಮುಖ್ಯಮಂತ್ರಿ ಯಡಿಯೂರಪ್ಪ ಭಾಗಿಯಾಗಿಯಾಗಿರುವುದು ಸ್ಪಷ್ಟವಾಗಿದೆ. ಪಕ್ಷಾಂತರ ಮಾಡಲು ಇವರೇ ಕಾರಣರಾಗಿದ್ದಾರೆ. ಮೈತ್ರಿ ಸರ್ಕಾರ ಬೀಳಲು ಇವರೇ ಕಾರಣರಾಗಿದ್ದಾರೆ. ಕುದುರೆ ವ್ಯಾಪಾರ ಮಾಡಿದ್ದಾರೆ. ಸಂವಿಧಾನಕ್ಕೆ ವಿರೋಧವಾಗಿ ವರ್ತಿಸಿದ್ದಾರೆ’ ಎಂದು ಆರೋಪಿಸಿದರು.

‘ಸಂವಿಧಾನಿಕ ಹುದ್ದೆಯಲ್ಲಿರುವವರು ಈ ರೀತಿ ಮಾಡಿದರೆ ಹೇಗೆ?. ಆಯಾ ರಾಂ ಗಯಾರಾಂ ಮಾಡಿಸಿದ್ದಾರೆ. ಇದು 10ನೇ ಶೆಡ್ಯೂಲ್‌ನ ಸ್ಪಷ್ಟ ಉಲ್ಲಂಘನೆ. ಯಡಿಯೂರಪ್ಪ ಹಾಗೂ ಅಮಿತ್ ಶಾರನ್ನು ರಾಜೀನಾಮೆ‌ ಕೊಡಬೇಕೆಂದು ರಾಷ್ಟ್ರಪತಿಯವರಲ್ಲಿ ಮನವರಿಕೆ ಮಾಡಲಿದ್ದೇವೆ’ ಎಂದರು. 

ಉಪಚುನಾವಣೆ ಅಭ್ಯರ್ಥಿ ಘೋಷಣೆ ವಿಚಾರ

‘ಎಂಟು ಕ್ಷೇತ್ರಗಳ ಟಿಕೆಟ್ ಘೋಷಣೆ‌ ಮಾಡಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಉಳಿದ ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸಲಿದ್ದೇವೆ‌’ ಎಂದು ಹೇಳಿದರು.

ಟಿಪ್ಪು ವಿಚಾರ ಪಠ್ಯದಿಂದ ತೆಗೆಯುವ ವಿಚಾರ

‘ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ಸಭೆ ನಡೆಯುತ್ತಿರುವ ಬಗ್ಗೆ ಗಮನಕ್ಕೆ‌ ಬಂದಿದೆ. ಒಂದು ವೇಳೆ ಪಠ್ಯದಿಂದ ಟಿಪ್ಪು ವಿಚಾರಗಳನ್ನು ತೆಗೆದರೆ ಮೈಸೂರು ಇತಿಹಾಸ ಅಪೂರ್ಣವಾಗುತ್ತದೆ. ಹಾಗೆ ಆಗಲು ನಾವು ಬಿಡುವುದಿಲ್ಲ’ ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)