ಭಾನುವಾರ, ಏಪ್ರಿಲ್ 18, 2021
26 °C

ಮೊಬೈಲ್, ಆಟೊ ಕಳ್ಳನ ಬಂಧನ: ಮಾರಕಾಸ್ತ್ರ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೈಕ್‌ನಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿದ್ದ ಹಾಗೂ ಮೊಬೈಲ್, ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ರಾಜರಾಜೇಶ್ವರಿ ನಗರದ ಜವರೇಗೌಡ ನಗರ ನಿವಾಸಿ ಮನು (25) ಬಂಧಿತ ಆರೋಪಿ.

‘ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯ ಸಿದ್ಧಲಿಂಗಯ್ಯ ಉದ್ಯಾನದ ಬಳಿ ಆರೋಪಿ ಬೈಕ್‌ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಪೊಲೀಸರು ಈತನನ್ನು ತಡೆದು ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಚೀಲದಲ್ಲಿ ಲಾಂಗ್‌, ಚೂರಿ ಹಾಗೂ ಮೊಬೈಲ್‌ಗಳು ಪತ್ತೆಯಾಗಿದ್ದವು. ಕೂಡಲೇ ಆರೋಪಿಯನ್ನು ಬಂಧಿಸಿ, ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಯಿತು’ ಎಂದು ಪೊಲೀಸರು ತಿಳಿಸಿದರು.

‘ಆರೋಪಿಯನ್ನು ದಸ್ತಗಿರಿ ಮಾಡಿ, ರಾಜರಾಜೇಶ್ವರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳವಾಗಿದ್ದ ಎಂಟು ಮೊಬೈಲ್‌ಗಳು ಹಾಗೂ ಒಂದು ಆಟೊ ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ ಕಳವು ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.