ಶನಿವಾರ, ಜನವರಿ 16, 2021
24 °C

ವಾಯುಭಾರ ಕುಸಿತ: ಮಳೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದ್ದು, ರಾಜ್ಯದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

‘ದಕ್ಷಿಣ ಒಳನಾಡಿನಲ್ಲಿ ಡಿ.1ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ನ.29ರವರೆಗೆ ಮಳೆಯಾಗಲಿದ್ದು, ನ.30 ಮತ್ತು ಡಿ.1ರಂದು ಒಣಹವೆ ನಿರೀಕ್ಷಿಸಲಾಗಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

‘ಕರಾವಳಿಯಲ್ಲಿ ಶನಿವಾರ ಅಲ್ಲಲ್ಲಿ ಹಗುರ ಮಳೆಯಾಗಲಿದ್ದು, ನ.29ರಿಂದ ಡಿ.1ರವರೆಗೆ ಒಣಹವೆ ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಕೆಲವೆಡೆ ಹಗುರ ಮಳೆಯಾಗುವ ಮತ್ತು ಮುಂಜಾನೆ ಮಂಜು ಬೀಳುವ ಸಾಧ್ಯತೆ ಇದೆ’ ಎಂದು ವಿವರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು