ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

Published 16 ಮೇ 2023, 20:49 IST
Last Updated 16 ಮೇ 2023, 20:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ವ್ಯಾಪ್ತಿಯ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಬುಧವಾರ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು, ಕರಾವಳಿ ಹಾಗೂ ಉತ್ತರ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಈ ಭಾಗದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಆಕಾಶ ಶುಭ್ರವಾಗಿ ಇರಲಿದ್ದು, ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಗರಿಷ್ಠ ಉಷ್ಣಾಂಶ 40.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು ಎಂದು ಐಎಂಡಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT