ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಳೆ ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ

Published 14 ಮೇ 2024, 16:04 IST
Last Updated 14 ಮೇ 2024, 16:04 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಬುಧವಾರವೂ ಮಳೆ ಮುಂದುವರಿಯಲಿದ್ದು, ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಜತೆಗೆ ಚಾಮರಾಜನಗರ, ಶಿವಮೊಗ್ಗ, ಬಳ್ಳಾರಿ ಹಾಗೂ ಹಾಸನ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಭಾರಿ ಗಾಳಿ (40ರಿಂದ 50 ಕಿ.ಮೀ. ವೇಗ) ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ರಾಮನಗರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ದಾವಣಗೆರೆ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಜೋರು ಗಾಳಿಯೊಂದಿಗೆ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. 

ಇದೇ 21ರವರೆಗೂ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT